ಉಡುಪಿ: ಜಿಲ್ಲೆಯಲ್ಲಿ ಆಗುವ ಜನನ ಮತ್ತು ಮರಣವನ್ನು ‘ಜನನ ಮರಣ ನೋಂದಣಿ ಅಧಿನಿಯಮಗಳ’ ಅನ್ವಯ ಪ್ರತಿಯೊಬ್ಬರೂ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಜನನ–ಮರಣ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಜನನ ಹಾಗೂ ಮರಣ ದಾಖಲಾತಿಗಳು ಜೀವನದ ಪ್ರತಿ ಹಂತದಲ್ಲೂ ಅವಶ್ಯಕ ದಾಖಲೆಗಳು. ಪ್ರತಿಯೊಬ್ಬರೂ ಸೂಕ್ತ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು ಎಂದರು.

ಜನನ ಹಾಗೂ ಮರಣ ದಾಖಲಾತಿಗಳ ನೋಂದಣಿಯಲ್ಲಿ ಶೇ 100ರಷ್ಟು ಪ್ರಗತಿ ಸಾಧಿಸಬೇಕು. ಪ್ರಮಾಣಪತ್ರ ಕೋರಿ ಅರ್ಜಿ ಸಲ್ಲಿಸಿದಾಗ ವಿಳಂಬವಿಲ್ಲದೆ ಕಾಲಮಿತಿಯೊಳಗೆ ವಿತರಿಸಬೇಕು ಎಂದು ಸೂಚನೆ ನೀಡಿದರು.

ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ ಹಾಗೂ ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ನಗರ, ಗ್ರಾಮೀಣ ಭಾಗದಲ್ಲಿನ ಜನನ–ಮರಣ ನೋಂದಣಾಧಿಕಾರಿಗಳು ಅಥವಾ ಉಪ ನೋಂದಣಾಧಿಕಾರಿಗಳು ಸಂಬಂಧಿಸಿದ ಪ್ರದೇಶಗಳ ವರದಿಯನ್ನು ಸಕಾಲದಲ್ಲಿ ಸಲ್ಲಿಸಬೇಕು. ಅವುಗಳನ್ನು ಸಂರಕ್ಷಿಸಿ, ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜನನ–ಮರಣ ನೋಂದಣಿ ಮಾಹಿತಿಯನ್ನು ನಿಖರವಾಗಿ ಸಂಗ್ರಹಿಸಲು ಅನುಕೂಲವಾಗುವಂತೆ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ಗಳು ಆಗಿಂದಾಗ್ಗೆ ಸಭೆ ನಡೆಸಿ, ದಾಖಲಾತಿಗಳನ್ನು ಪರಿಶೀಲನೆ ನಡೆಸಬೇಕು ಎಂದರು.

ಜನನ–ಮರಣ ನೋಂದಣಿಯ ಅಗತ್ಯ, ಪ್ರಾಮುಖ್ಯತೆ ಬಗ್ಗೆ ಗ್ರಾಮೀಣ, ನಗರ ಪ್ರದೇಶ ವ್ಯಾಪ್ತಿಯಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ, ಆಸ್ಪತ್ರೆಗಳಲ್ಲಿ ನೋಂದಣಿಯ ಮಹತ್ವ ಕುರಿತು ಅರಿವು ಮೂಡಿಸುವ ಫಲಕಗಳನ್ನು ಅಳವಡಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎಂ.ವಿ.ದೊಡ್ಡಮನಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.