ಉಡುಪಿ: ಕೇಂದ್ರದ ಬಿಜೆಪಿ ಸರ್ಕಾರವು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವ ಮೂಲಕ ಧನಿಕರಿಗಾಗಿ ಸರ್ಕಾರದ ಧೋರಣೆಗಳನ್ನು ಸರಳೀಕರಿಸಿದೆ ಎಂದು ಸಿಐಟಿಯು ರಾಜ್ಯ ಘಟಕದ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಆರೋಪಿಸಿದರು.

ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಅಂಗವಾಗಿ ನಗರದ ವಿಮಾ ನೌಕರರ ಲಿಕೋ ಬ್ಯಾಂಕ್ನ ವಜ್ರ ಮಹೋತ್ಸವ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಕಾರ್ಮಿಕರಿಗೆ ಉದ್ಯೋಗ ಭದ್ರತೆ ಕೊಡಲು, ಯುವಜನ, ಮಹಿಳೆಯರ ಸಬಲೀಕರಣಕ್ಕಾಗಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ತರಲಾಗಿದೆ ಎಂದು ಕೇಂದ್ರ ಸರ್ಕಾರವು ಹೇಳುತ್ತಿದೆ. ಆದರೆ ವಾಸ್ತವವಾಗಿ ಕಂಪನಿಗಳ ಪರವಾಗಿ ಈ ಸಂಹಿತೆಯನ್ನು ಜಾರಿಗೊಳಿಸಲಾಗಿದೆ ಎಂದರು.

ಕಾರ್ಮಿಕ ಸಂಹಿತೆ ಮೂಲಕ ದುಡಿಯುವ ಅವಧಿಯನ್ನು ದಿನದಲ್ಲಿ 12 ಗಂಟೆಗೆ ಏರಿಸಲು ಪ್ರಯತ್ನ ನಡೆಸಲಾಗುತ್ತಿದೆ. ಹಿಂದೆ ದೇಶದಲ್ಲಿ 44 ಕಾರ್ಮಿಕ ಕಾಯಿದೆಗಳಿತ್ತು. ಅವುಗಳಲ್ಲಿ 29 ಕಾರ್ಮಿಕ ಕಾಯಿದೆಗಳನ್ನು ಸಂಯೋಜಿಸಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಮಾಡಲಾಗಿದೆ ಎಂದು ಹೇಳಿದರು.

ಬ್ಯಾಂಕ್ ಯೂನಿಯನ್ನ ಜಿಲ್ಲಾ ಕಾರ್ಯದರ್ಶಿ ನಾಗೇಶ್ ಕಾಮತ್ ಮಾತನಾಡಿ, ಬ್ಯಾಂಕ್ಗಳ ವಿಲೀನದಿಂದಾಗಿ ಇಂದು ಅನೇಕ ಶಾಖೆಗಳು ಮುಚ್ಚಿಹೋಗಿವೆ. ಅದರಿಂದ ಜನರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ ಎಂದರು.

ಸಿಬ್ಬಂದಿಯನ್ನು ಸಮರ್ಪಕವಾಗಿ ನೇಮಕ ಮಾಡದಿರುವುದರಿಂದ ಯುವಜನರು ಬ್ಯಾಂಕ್ ನೌಕರಿಯಿಂದ ವಂಚಿತರಾಗುತ್ತಿದ್ದಾರೆ. ಈಗಾಗಲೇ ಅನೇಕ ನೌಕರರು ಸ್ವಯಂ ನಿವೃತ್ತಿ ಪಡೆದಿದ್ದಾರೆ. ಇರುವವರು ಕೆಲಸದ ಒತ್ತಡದಿಂದ ಬೇಸತ್ತಿದ್ದಾರೆ ಎಂದು ಹೇಳಿದರು.

ಕಾರ್ಮಿಕ ವರ್ಗ ಒಂದಾಗಿ ಸರ್ಕಾರದ ಧೋರಣೆಗಳನ್ನು ಖಂಡಿಸಬೇಕು. ಇಂದು ಕಾರ್ಮಿಕರ ಅನೇಕ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ. ಕಾರ್ಮಿಕರೆಂದರೆ ದೇಶದ ಆರ್ಥಿಕ ಸಂಪನ್ಮೂಲ ಆದರೆ ಯಾವ ಸರ್ಕಾರಗಳೂ ಕಾರ್ಮಿಕರಿಗೆ ಒಳ್ಳೆಯದನ್ನು ಮಾಡಿಲ್ಲ ಎಂದರು.

ಚಿಂತಕ ಫಣಿರಾಜ್ ಮಾತನಾಡಿದರು. ವಿಮಾ ನೌಕರರ ಸಂಘದ ಪ್ರಧಾನ ಕೆ. ವಿಶ್ವನಾಥ ಅಧ್ಯಕ್ಷತೆ ವಹಿಸಿದ್ದರು. ಎಐಟಿಯುಸಿಯ ಶಿವಾನಂದ, ಇಂಟಕ್ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷ ಕಿರಣ್ ಹೆಗ್ಡೆ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಕಟ್ಟಡ ಸಂಘದ ಮುಖಂಡ ಸೈಯಾದ್ ಅಲಿ ವಂದಿಸಿದರು. ಜೆಸಿಟಿಯು ಉಡುಪಿ ಜಿಲ್ಲಾ ಸಂಚಾಲಕ ಕವಿರಾಜ್ ಎಸ್. ಕಾಂಚನ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.