ಉಡುಪಿ: ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವಾಗ ಅಧಿಕಾರಿಗಳು ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಬಿಜೆಪಿ ಶಾಸಕರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಶಿಷ್ಟಾಚಾರ ಪಾಲಿಸದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡು ಬಳಿಕ ಸಭೆ ಮುಂದುವರಿಸಿ ಎಂದೂ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಆಗ್ರಹಿಸಿದರು.

ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಮಾತನಾಡಿ, ‘ಜಿಲ್ಲಾಡಳಿತಕ್ಕೆ ಲಂಗು ಲಗಾಮಿಲ್ಲ. ಹೇಗೆ ಬೇಕಾದರೂ ಕೆಲಸ ಮಾಡಬಹುದೆಂಬ ನಿಲುವಿದೆ. ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಉಲ್ಲಂಘನೆ ನಿರಂತರ ಪ್ರಕ್ರಿಯೆಯಾಗಿದೆ. ಸಚಿವರಿಗೂ ಅದನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿ ಎಲ್ಲಾ ಇಲಾಖೆಗಳನ್ನೂ ಬಿಗಿ ಮಾಡಿದ್ದರೆ ಇಂದು ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸುವ ಪರಿಸ್ಥಿತಿ ಬರುತ್ತಿರಲಿಲ್ಲ’ ಎಂದರು.

‘ಹಕ್ಕು ಪತ್ರ ವಿತರಣೆ ಮಾಡಿದ್ದಕ್ಕೆ ನಮ್ಮ ಆಕ್ಷೇಪ ಇಲ್ಲ. ಆದರೆ ಹಕ್ಕು ಪತ್ರ ವಿತರಿಸುವಾಗ ಸ್ಥಳೀಯ ಶಾಸಕರ ಗಮನಕ್ಕೆ ತರುವುದಿಲ್ಲ. ಯಕ್ಷ ರಂಗಾಯಣದ ಆಮಂತ್ರಣ ಪತ್ರಿಕೆಯಲ್ಲಿ ಉಸ್ತುವಾರಿ ಸಚಿವರದ್ದೇ ಹೆಸರಿಲ್ಲ’ ಎಂದು ಸುನಿಲ್ ಕುಮಾರ್ ಆರೋಪಿಸಿದರು.

‘ನನ್ನ ಕ್ಷೇತ್ರದ ಹಕ್ಕುಪತ್ರವನ್ನು ಯಾರು ವಿತರಿಸಬೇಕು. ಒಂದು ರಾಜಕೀಯ ಪಕ್ಷದ ಕಚೇರಿಯಲ್ಲಿ ಹಕ್ಕುಪತ್ರ ವಿತರಣೆ ಹೇಗೆ ಆಗುತ್ತದೆ. ಆ ಹಕ್ಕು ಪತ್ರವನ್ನು ಅಲ್ಲಿಗೆ ತೆಗೆದುಕೊಂಡು ಹೋಗಿದ್ದು ಯಾರು? ನಮಗೆ ಕೆಲಸ ಇಲ್ಲದ್ದಕ್ಕೆ ನಾವು ಇಲ್ಲಿಗೆ ಬಂದಿಲ್ಲ. ತಹಶೀಲ್ದಾರ್ ಏನು ಮಾಡುತ್ತಿದ್ದಾರೆ. ಯಾರು ಶಿಷ್ಟಾಚಾರ ಉಲ್ಲಂಘಿಸಿದ್ದಾರೋ. ಅವರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ಹೇಳಿದರು. ಅದಕ್ಕೆ ಶಾಸಕರಾದ ಕಿರಣ್ಕುಮಾರ್ ಕೊಡ್ಗಿ, ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ ಧ್ವನಿಗೂಡಿಸಿದರು.

ಅದಕ್ಕೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ‘ಶಿಷ್ಟಾಚಾರ ಉಲ್ಲಂಘಿಸಿದ್ದಕ್ಕೆ ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಮತ್ತು ಕಾರ್ಕಳ ತಹಶೀಲ್ದಾರ್ಗೆ ನೋಟಿಸ್ ಜಾರಿ ಮಾಡಿ’ ಎಂದು ಸೂಚಿಸಿದರು.

‘ಅಧಿಕಾರಿಗಳಿಗೆ ಇದು ಕೊನೆಯ ಎಚ್ಚರಿಕೆ. ಮುಂದಿನ ಕೆಡಿಪಿ ಸಭೆಯಲ್ಲಿ ಶಿಷ್ಟಾಚಾರ ಉಲ್ಲಂಘನೆಯಾದ ಬಗ್ಗೆ ದೂರುಗಳು ಬಂದರೆ ಒಂದೇ ನಿಮಿಷದಲ್ಲಿ ಕಾರಣರಾದ ಅಧಿ ಕಾರಿಯನ್ನು ಅಮಾನತು ಮಾಡುತ್ತೇನೆ’ ಎಂದು ಎಚ್ಚರಿಕೆ ನೀಡಿದರು.

‘ಶಾಸಕರಿಗೆ ಫೋನ್ ಮೂಲಕ ಮಾಹಿತಿ ನೀಡಬಹುದಿತ್ತಲ್ವಾ. ಅಧಿಕಾರಿಗಳು ಮಾಡುವ ತಪ್ಪಿಗೆ ನಾನು ಅನುಭವಿಸಬೇಕಾಗಿದೆ’ ಎಂದು ಸಚಿವೆ ಅಸಮಾಧಾನ ವ್ಯಕ್ತಪಡಿಸಿದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ವಿಧಾನಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಕಿಶೋರ್ ಕುಮಾರ್ ಪುತ್ತೂರು, ಶಾಸಕರಾದ ವಿ.ಸುನಿಲ್ ಕುಮಾರ್, ಯಶ್ಪಾಲ್ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಡಿ.ಎಫ್.ಒ ರುಥ್ರೇನ್ ಪಿ., ವನ್ಯಜೀವಿ ವಿಭಾಗದ ಡಿ.ಎಫ್.ಒ. ಶಿವರಾಮ್ ಎಂ. ಬಾಬು ಉಪಸ್ಥಿತರಿದ್ದರು.

ಪತ್ರಕರ್ತರೊಂದಿಗೆ ವಾಗ್ವಾದ: ಹಕ್ಕು ಪತ್ರ ವಿತರಣೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ನಡೆದ ಬಳಿಕ ಪತ್ರಕರ್ತರನ್ನು ಸಭಾಂಗಣದಿಂದ ಹೊರಗೆ ತೆರಳುವಂತೆ ಸೂಚಿಸಲಾಗಿತ್ತು. ಆಗ ಪತ್ರಕರ್ತರು ಕೆಡಿಪಿ ಸಭೆಯಲ್ಲಿ ಕುಳಿತುಕೊಳ್ಳಲು ನಮಗೂ ಅವಕಾಶ ನೀಡಿ ಎಂದು ಮನವಿ ಮಾಡಿದರು. ಆದರೆ ಅದಕ್ಕೆ ಅಧಿಕಾರಿಗಳು ಹಾಗೂ ಸಚಿವೆ ಒಪ್ಪಲಿಲ್ಲ. ಬಳಿಕ ವಾಗ್ವಾದ ನಡೆದು ಪತ್ರಕರ್ತರಿಗೂ ಸಭೆಯಲ್ಲಿ ಕುಳಿತುಕೊಳ್ಳಲು ಅನುಮತಿ ನೀಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-28-2030438874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.