ಸೋಮವಾರ, ಸೆಪ್ಟೆಂಬರ್ 20, 2021
22 °C

ಉಡುಪಿ: ಸಮುದ್ರ ಪಾಲಾಗಿದ್ದ ಕೊಡಗು ಯುವತಿಯ ಶವ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಮಲ್ಪೆ ಬೀಚ್‌ನಲ್ಲಿ ಈಜುವಾಗ ಸಮುದ್ರ ಪಾಲಾಗಿದ್ದ ಕೊಡಗು ಜಿಲ್ಲೆಯ ಅಮ್ಮತ್ತಿಯ ಯು.ಜೆ.ದೇಚಮ್ಮ (20) ಶವ ಸೋಮವಾರ ಸಮೀಪದ ಸೀವಾಕ್ ಪ್ರದೇಶದಲ್ಲಿ ಪತ್ತೆಯಾಗಿದೆ.

ಮರಣೋತ್ತರ ಪರೀಕ್ಷೆಯ ಬಳಿಕ ಶವವನ್ನು ಪೋಷಕರಿಗೆ ಹಸ್ತಾಂತರ ಮಾಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ವಿವರ: ಮೈಸೂರಿನ ಎಂ.ಯು.ಶೈನಿ, ನವ್ಯ ಮಂದಣ್ಣ, ನಿಖಿಲ್ ಗೌಡ, ದೇಚಮ್ಮ ಶನಿವಾರ ಮಲ್ಪೆ ಬೀಚ್‌ಗೆ ಪ್ರವಾಸಕ್ಕೆ ಬಂದಿದ್ದರು. ಸಮುದ್ರದಲ್ಲಿ ಈಜುವಾಗ ಎಲ್ಲರೂ ನೀರಿನ ಸೆಳೆತಕ್ಕೆ ಸಿಲುಕಿದ್ದರು. ಕೂಡಲೇ ಮೀನುಗಾರರು ಮೂವರನ್ನು ರಕ್ಷಿಸಿ ದಡಕ್ಕೆ ಕರೆತಂದಿದ್ದರು. ಆದರೆ, ದೇಚಮ್ಮ ಮಾತ್ರ ನಾಪತ್ತೆಯಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.