ಉಡುಪಿ: ಕೊರಗ ಸಮುದಾಯದ ವ್ಯಕ್ತಿಯನ್ನು 30 ವರ್ಷಗಳಿಂದ ಜೀತದಾಳಾಗಿ ಇಟ್ಟುಕೊಂಡು ದೌರ್ಜನ್ಯ ಎಸಗಿದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಕುಂದಾಪುರ ತಾಲ್ಲೂಕಿನ ಕನ್ಯಾನ ಗ್ರಾಮದ ರಜನಿ ಶೆಟ್ಟಿ ಬಂಧಿತ ಮಹಿಳೆ.

ಪರಿಶಿಷ್ಟ ಪಂಗಡದ ಕೊರಗ ಸಮುದಾಯಕ್ಕೆ ಸೇರಿದ ಕನ್ಯಾನ ಗ್ರಾಮದ ನಾಗ (65) ಎಂಬುವವರನ್ನು ಸುಮಾರು 30 ವರ್ಷಗಳಿಂದ ಕುಂದಾಪುರದ ಹೆಮ್ಮಾಡಿಯ ಕಬ್ಬೈಲು ನಿವಾಸಿಯಾದ ಸುಬ್ಬಣ್ಣ ಶೆಟ್ಟಿ ಎಂಬುವವರು ಕೆಲಸಕ್ಕೆ ಇಟ್ಟುಕೊಂಡಿದ್ದರು. ಸುಬ್ಬಣ್ಣ ಶೆಟ್ಟಿ ಅವರು ಮೃತಪಟ್ಟ ನಂತರ ಅವರ ಮಗಳು ರಜನಿ ಶೆಟ್ಟಿ ಮತ್ತು ಅಳಿಯ ಕರುಣಾಕರ ಶೆಟ್ಟಿ ಅವರು ಕೂಡ ನಾಗ ಅವರನ್ನು ದನ ಕಾಯುವ, ತೋಟದ ಕೆಲಸಕ್ಕಾಗಿ ಮನೆಯಲ್ಲಿ ಇಟ್ಟುಕೊಂಡಿದ್ದರು.

ನಾಗ ಅವರಿಂದ 30 ವರ್ಷಗಳಿಂದ ಬಲವಂತದಿಂದ ಜೀತದಾಳಾಗಿ ಕೆಲಸ ಮಾಡಿಸಿಕೊಂಡಿದ್ದು, ಸರಿಯಾದ ಕೂಲಿ ಕೊಡದೆ, ಉಳಿದುಕೊಳ್ಳಲು ಮೂಲ ಸೌಕರ್ಯ ನೀಡದೆ, ದನದ ಕೊಟ್ಟಿಗೆಯಲ್ಲಿ ಮಲಗಿಸಿರುವುದಾಗಿ ದೂರಿನಲ್ಲಿ ಹೇಳಲಾಗಿದೆ.

ತಿಂಡಿ ತಟ್ಟೆ, ಬಟ್ಟೆ, ಎಲ್ಲವನ್ನೂ ದನದ ಕೊಟ್ಟಿಗೆಯಲ್ಲಿಯೇ ಇಡುವಂತೆ ಒತ್ತಾಯ ಮಾಡಿದ್ದು, ಊಟವನ್ನು ಸಹ ಬಾಳೆ ಎಲೆಯಲ್ಲಿ ನೀಡುತ್ತಿದ್ದರು. ಮನೆಯಿಂದ ಹೊರಗೆ ಹೋಗಲು ಬಿಡದೆ ದೌರ್ಜನ್ಯ ಎಸಗಿದ್ದಾರೆ ಎಂದು ನಾಗ ಅವರು ದೂರಿನಲ್ಲಿ ಹೇಳಿದ್ದಾರೆ.

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಮಹಿಳೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.