ಉಡುಪಿ: ಬ್ರಹ್ಮಾವರ ತಾಲ್ಲೂಕಿನ ಹೊಸಾಳ ಗ್ರಾಮದ ನಾಗರಮಠದಲ್ಲಿ ಕಾನೂನು ಉಲ್ಲಂಘನೆ ಮಾಡಿ ಅವೈಜ್ಞಾನಿಕವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದು, ಅದನ್ನು ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ಕೃಷಿಕರು ಹಾಗೂ ಗ್ರಾಮಸ್ಥರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಆರಂಭಿಸಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಶುಕ್ರವಾರ ಎರಡನೇ ದಿನಕ್ಕೆ ಕಾಲಿರಿಸಿದೆ.

‘ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಎರಡು ದಿನಗಳಿಂದ ಮಹಿಳೆಯರೂ ಸೇರಿದಂತೆ ಗ್ರಾಮಸ್ಥರು ಕಚೇರಿ ಅವಧಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದರೂ ಸಂಬಂಧಪಟ್ಟವರು ಯಾರೂ ಧರಣಿ ಸ್ಥಳಕ್ಕೆ ಬಂದಿಲ್ಲ’ ಎಂದು ಗ್ರಾಮಸ್ಥರಾದ ಚಂದ್ರ ಕಾಂಚನ್ ಆರೋಪಿಸಿದರು.

‘ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸುವುದಕ್ಕೂ ಮೊದಲು ಮೂರು ದಿವಸ ಮರಳು ಗಣಿಗಾರಿಕೆ ನಡೆಯುತ್ತಿರುವ ನಾಗರಮಠದಲ್ಲಿ ಧರಣಿ ನಡೆಸಿದ್ದೆವು. ಅಲ್ಲಿಗೂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಭೇಟಿ ನೀಡಿಲ್ಲ’ ಎಂದು ಅವರು ತಿಳಿಸಿದರು.

‘ಅವೈಜ್ಞಾನಿಕವಾಗಿ ಮರಳು ಗಣಿಗಾರಿಕೆ ನಡೆಯುತ್ತಿರುವುದರ ಬಗ್ಗೆ ದಾಖಲೆ ಸಮೇತ ಮಾಹಿತಿ ನೀಡಿದರೂ ಜಿಲ್ಲಾಧಿಕಾರಿ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಬೇಡಿಕೆ ಈಡೇರುವವರೆಗೂ ಉಪವಾಸ ಸತ್ಯಾಗ್ರಹ ಮುಂದುವರಿಸಲಿದ್ದೇವೆ’ ಎಂದು ಹೇಳಿದರು.

‘ನಾವು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ನಾಗರ ಮಠದಲ್ಲಿ ಪೊಲೀಸರ ಭದ್ರತೆಯಲ್ಲಿ ಮರಳು ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದೆ’ ಎಂದೂ ಅವರು ಆರೋಪಿಸಿದರು.

‘ಮರಳು ಗಣಿಗಾರಿಕೆಯಿಂದಾಗಿ ನಾಗರಮಠದ 100ಕ್ಕೂ ಹೆಚ್ಚು ಕುಟುಂಬಗಳಿಗೆ ತೊಂದರೆಯಾಗಿದೆ. ನದಿಯ ಆಳದಿಂದ ಮರಳು ತೆಗೆಯುತ್ತಿರುವ ಕಾರಣ ಸಮೀಪ ಪ್ರದೇಶದ ಮನೆಗಳ ಬಾವಿಗಳ ನೀರು ಉಪ್ಪಾಗಿದೆ. ಕೃಷಿ ಭೂಮಿಯೂ ಕೊಚ್ಚಿ ಹೋಗುವ ಭೀತಿ ಎದುರಾಗಿದ್ದು, ಕೂಡಲೇ ಅವೈಜ್ಞಾನಿಕ ಮರಳು ಗಣಿಗಾರಿಕೆಯನ್ನು ನಿಲ್ಲಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಅಶೋಕ್ ಅಮೀನ್, ಕೃಷ್ಣ ಬಂಗೇರ, ಚಂದ್ರ ಕುಂದರ್, ಶ್ರೀನಿವಾಸ, ಆಶಾಲತಾ, ಪ್ರೇಮಾ, ವನಜಾ, ಆನಂದ ಶೆಟ್ಟಿಗಾರ್, ಡೆರಿಲ್ ಬಾಂಜ್, ಜೋಸೆಫ್ ಡಿಸೋಜ, ಶೇಖರ ಮರಕಾಲ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-28-749336446

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.