ಬ್ರಹ್ಮಾವರ: ಇಲ್ಲಿಗೆ ಸಮೀಪದ ಸಾಲಿಗ್ರಾಮದ ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಆರಂಭೋ ತ್ಸವವು ಸೋಮವಾರ ನಡೆಯಿತು.

ಶಾಲೆಯ ಪ್ರವೇಶ ದ್ವಾರದಿಂದ ವಿದ್ಯಾರ್ಥಿಗಳನ್ನು ಬ್ಯಾಂಡ್ ಸೆಟ್ ಮೊದಲಾದ ವಾದ್ಯಗಳ ಮೆರವಣಿಗೆಯ ಮೂಲಕ ಅತ್ಯಂತ ಸಾದರದಿಂದ ಬರಮಾಡಿಕೊಳ್ಳಲಾಯಿತು.

ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಮಾತನಾಡಿ, ‘ಮಕ್ಕಳು ಬಾಲ್ಯದಿಂದಲೇ ಹಿರಿಯರಿಗೆ ಹಾಗೂ ಶಿಕ್ಷಕರಿಗೆ ಗೌರವ ಕೊಡುವ ಉತ್ತಮ ಪರಿಪಾಟವನ್ನು ಬೆಳೆಸಿಕೊಳ್ಳಬೇಕು. ದೇಶದ ಆಸ್ತಿಯಾಗಿರುವ ಶಾಲೆಯ ವಸ್ತುಗಳನ್ನು ಹಾಗೂ ಪರಿಸರವನ್ನು ಹಾಳು ಮಾಡಬಾರದು. ಅವುಗಳನ್ನು ಜತನ ದಿಂದ ಕಾಯ್ದುಕೊಳ್ಳಬೇಕು’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಯಿತು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಗುರುರಾಜ ಉಪಾಧ್ಯ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಮುಖ್ಯಶಿಕ್ಷಕ ಸತ್ಯನಾರಾಯಣ ಸ್ವಾಗತಿಸಿದರು. ಶಾಲಾ ಸಂಚಾಲಕ ಪ್ರಭಾಕರ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಸುಧೀರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಗೀತಾ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-28-1945413951

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.