ಉಡುಪಿ: ನಗರಸಭಾ ವ್ಯಾಪ್ತಿಯ ಕಡಿಯಾಳಿ, ಗುಂಡಿಬೈಲು, ಬನ್ನಂಜೆ ವಾರ್ಡಿನ ಪ್ರಮುಖ ತೋಡುಗಳ ಹೂಳು ತೆರವುಗೊಳಿಸಿದ ಸ್ಥಳಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಾಕಿ ಇರುವ ತೋಡುಗಳ ಹೂಳು ತಕ್ಷಣ ತೆರವು ಮಾಡುವಂತೆ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಕಡಿಯಾಳಿ, ಕಲ್ಸಂಕ, ಗುಂಡಿಬೈಲು, ಮಠದಬೆಟ್ಟು, ಬನ್ನಂಜೆ ಗರಡಿ ಬಳಿಯ ತೋಡುಗಳಲ್ಲಿ ಭಾರೀ ಪ್ರಮಾಣದಲ್ಲಿ ಹೂಳು ಶೇಖರಣೆಯಾಗಿ ನೀರು ಸರಾಗವಾಗಿ ಹರಿಯಲು ತೊಂದರೆಯಾಗಿದ್ದು, ಆದ್ಯತೆಯ ಮೇರೆಗೆ ಹೂಳು ತೆರವಿಗೆ ಕ್ರಮ ವಹಿಸುವಂತೆ ತಿಳಿಸಿದರು.

ನಗರಸಭೆಯ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ನಗರಸಭೆ ಮಾಜಿ ಸದಸ್ಯರಾದ ಹರೀಶ್ ಶೆಟ್ಟಿ, ಹರೀಶ್ ರಾಮ್ ಬನ್ನಂಜೆ, ಸತೀಶ್ ಕುಲಾಲ್ ಕಡಿಯಾಳಿ, ಆನಂದ ಮಠದಬೆಟ್ಟು, ಉದಯ ಮಠದಬೆಟ್ಟು, ನಗರಸಭೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ದುರ್ಗಾ ಪ್ರಸಾದ್, ಪರಿಸರ ಅಧಿಕಾರಿ ರವಿಶಂಕರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-28-37026719

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.