ಉಡುಪಿ: ಮಲ್ಪೆ ಬಂದರಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಮಲ್ಪೆ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಮೋದ್ ಮಧ್ವರಾಜ್ ಅವರು, ‘ನಮ್ಮ ಮನೆಗೆ ಕಳ್ಳರು ಬಂದರೆ ನಾವು ಏನು ಮಾಡುತ್ತೇವೆ? ಪೊಲೀಸರು ಬರುವುದಕ್ಕೆ ಐದಾರು ಗಂಟೆ ತಡವಾದರೆ ಕಳ್ಳರನ್ನು ಕಟ್ಟಿ ಹಾಕಲೇಬೇಕು. ಅವರಿಗೆ ಮಚ್ಚಿನಲ್ಲಿ ಖಡ್ಗದಲ್ಲಿ ತಲವಾರಿನಲ್ಲಿ ಹೊಡೆದಿದ್ದಾ? ಕೆನ್ನೆಗೆ ಎರಡು ಬಾರಿಸಿದ್ದು’ ಎಂದು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

‘ಕಳ್ಳಿ ಅಂತ ಆರೋಪಿಸಿರುವ ಮಹಿಳೆಗೆ ಏನಾದರೂ ಆಕ್ಷೇಪ ಉಂಟಾ?’ ಎಂದು ಮಹಿಳೆಗೆ ಸಾರ್ವಜನಿಕವಾಗಿ ಕಟ್ಟಿ ಹಾಕಿ ಹೊಡೆದುದ್ದನ್ನು ಸಮರ್ಥನೆ ಮಾಡಿಕೊಂಡು, ಸಾರ್ವಜನಿಕರಿಂದ ಇಂತಹ ಅಪರಾಧ ಮಾಡಿಸಲು ಪ್ರೇರಣೆ ನೀಡಿ ದ್ವೇಷ ಭಾವನೆಯಿಂದ ಭಾಷಣ ಮಾಡಿದ್ದಾರೆ ಎಂಬುದೂ ದೂರಿನಲ್ಲಿದೆ.

ದೊಂಬಿ ನಡೆಯುವ ಸಂಭವ ಇದೆ ಎಂದು ಗೊತ್ತಿದ್ದೂ ಅಲ್ಲಿದ್ದವರನ್ನು ಪ್ರಚೋದಿಸುತ್ತಾ ಉದ್ರೇಕಕಾರಿ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.