ಉಡುಪಿ: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏ. 23 ಮತ್ತು 24ರಂದು ನಡೆಯಲಿದ್ದು, ಜಿಲ್ಲೆಯಲ್ಲಿ 8,746 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನ ಸಿಇಟಿ ಉಡುಪಿ ತಾಲ್ಲೂಕಿನ 11, ಕಾರ್ಕಳ ತಾಲ್ಲೂಕಿನ 5 ಹಾಗೂ ಕುಂದಾಪುರ ತಾಲ್ಲೂಕಿನ 7 ಕಡೆ ಸೇರಿದಂತೆ ಒಟ್ಟು 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಗೊಂದಲವಾಗದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದರು.

ಪರೀಕ್ಷೆಗಳು ಆರಂಭವಾಗುವ ಎರಡೂವರೆ ಗಂಟೆ ಮೊದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ವಿದ್ಯಾರ್ಥಿಗಳ ತಪಾಸಣಾ ಕಾರ್ಯವನ್ನು ಗೊಂದಲಗಳಿಗೆ ಅವಕಾಶವಿಲ್ಲದಂತೆ ನಡೆಸಿ, ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಿಗೆ ತೆರಳಲು ಅನುವು ಮಾಡಿಕೊಡಬೇಕು ಎಂದು ಸೂಚನೆ ನೀಡಿದರು.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ವಾಚ್, ಮೊಬೈಲ್ ಫೋನ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ ಎಂದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು, ಕೊಠಡಿ ಮೇಲ್ವಿಚಾರಕರನ್ನು ನೇಮಿಸಲಾಗುವುದು. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಲಾಗುವುದು ಎಂದು ತಿಳಿಸಿದರು.

ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಗಡಿಯಾರದ ವ್ಯವಸ್ಥೆಯನ್ನು ಮಾಡಬೇಕು. ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಪರೀಕ್ಷಾ ದಿನದಂದು ಹಾಗೂ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಾಗಲು ಅನುಕೂಲವಾಗುವಂತೆ ವಿದ್ಯುತ್ ಸಂಪರ್ಕ ವ್ಯತ್ಯಯವಾಗದಂತೆ ಎಚ್ಚರವಹಿಸಬೇಕು ಎಂದರು.

ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ ಟಿ.ವಿ. ಕ್ಯಾಮೆರಾವನ್ನು ಕಡ್ಡಾಯವಾಗಿ ಅಳವಡಿಸಬೇಕು. ವೆಬ್ಕಾಸ್ಟಿಂಗ್ ಸಹ ನಡೆಯಲಿದೆ. ಸಿಇಟಿ ಪರೀಕ್ಷೆ ಕುರಿತ ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಖಜಾನೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯಲ್ಲಿ ಇಡಬೇಕು. ಖಜಾನೆಗಳಲ್ಲಿ ಸಿ.ಸಿ ಟಿ.ವಿ. ಕ್ಯಾಮೆರಾ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎ.ಎಸ್.ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-28-1939750585

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.