ಉಡುಪಿ: ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಗಣೇಶ ಹಬ್ಬದ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಸರ ಸ್ನೇಹಿ ಮಣ್ಣಿನ ಗಣಪತಿಗಳನ್ನು ಪ್ರತಿಷ್ಠಾಪನೆ ಮಾಡುವುದರಿಂದ ಪರಿಸರಕ್ಕೆ ಮಾರಕವಾಗುವುದನ್ನು ತಪ್ಪಿಸಬಹುದು. ಪಿ.ಒ.ಪಿ ಯಿಂದ ನಿರ್ಮಿಸಿರುವ ಹಾಗೂ ಬಣ್ಣಲೇಪಿತ ಗಣೇಶ ಮೂರ್ತಿಗಳನ್ನು ನೀರಿನಲ್ಲಿ ವಿಸರ್ಜಿಸಿದಾಗ ವಿಷಕಾರಿ ರಾಸಾಯನಿಕಗಳು ಜಲಮೂಲಗಳಾದ ಕೆರೆ, ಬಾವಿ, ಹಳ್ಳ ಸೇರಿ ನೀರು ಕಲುಷಿತಗೊಳ್ಳುತ್ತದೆ. ಇದು ಜಲಚರಗಳಿಗೆ ಹಾಗೂ ಮಾನವನಿಗೆ ಅತ್ಯಂತ ಹಾನಿಕರ ಎಂದರು.

ಪಿ.ಒ.ಪಿ ಗಣಪತಿ ವಿಗ್ರಹಗಳ ಸಾಗಣೆ, ದಾಸ್ತಾನು ಹಾಗೂ ಮಾರಾಟವನ್ನು ತಡೆಗಟ್ಟಬೇಕು. ವಿಗ್ರಹಗಳ ತಯಾರಿಕಾ ಘಟಕ, ಮಾರಾಟ ಸ್ಥಳಗಳಿಗೆ ಅನಿರೀಕ್ಷಿತ ಭೇಟಿಗಳನ್ನು ನೀಡಿ, ತಪಾಸಣೆ ಮಾಡಬೇಕು ಎಂದು ಸೂಚಿಸಿದರು.

ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ಅನುಕೂಲವಾಗುವಂತೆ ಸ್ಥಳೀಯ ಸಂಸ್ಥೆಗಳು ಕೆರೆ, ನದಿಪಾತ್ರಗಳಲ್ಲಿ ಸ್ಥಳಗಳನ್ನು ನಿಗದಿಪಡಿಸಬೇಕು. ಪೂಜೆಗೆ ಬಳಸಿದ ಹೂವು ಸೇರಿದಂತೆ ಮತ್ತಿತರ ತ್ಯಾಜ್ಯಗಳ ಶೇಖರಣೆಗೆ ಸಂಗ್ರಹಣಾ ಘಟಕಗಳನ್ನು ಅಳವಡಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾತನಾಡಿ, ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳಿಗೆ ಪ್ರತಿ ಸಮಿತಿಯವರು ಕಡ್ಡಾಯವಾಗಿ ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದು ಬಳಿಕ ಪ್ರತಿಷ್ಠಾಪಿಸಬೇಕು ಎಂದು ಹೇಳಿದರು.

ಗಣೇಶ ಪ್ರತಿಷ್ಠಾನ ಪೆಂಡಾಲ್ಗಳಲ್ಲಿ ಸಿ.ಸಿ.ಟಿ.ವಿ.ಗಳ, ಬೆಳಕಿನ ವ್ಯವಸ್ಥೆಗಳನ್ನು ಆಯೋಜಕರು ಮಾಡಬೇಕು, ಬ್ಯಾನರ್ಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಅಳವಡಿಕೆ ಮಾಡುವಂತಿಲ್ಲ. ಬ್ಯಾನರ್ಗಳ ಅಳವಡಿಕೆಗೆ ಸೂಕ್ತ ಪ್ರಾಧಿಕಾರದ ಅನುಮತಿ ಪಡೆಯಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಎಎಸ್ಪಿ ಸುಧಾಕರ್ ನಾಯಕ್, ಸಹಾಯಕ ಆಯುಕ್ತೆ ರಶ್ಮಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹೊರ ಜಿಲ್ಲೆಗಳಿಂದ ಪಿ.ಒ.ಪಿ ವಿಗ್ರಹಗಳು ಬರುವ ಸಾಧ್ಯತೆ ಇರುವ ಕಾರಣ ಜಿಲ್ಲೆಯ ಗಡಿ ಭಾಗಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ ಪಿ.ಒ.ಪಿ ಗಣೇಶ ಮೂರ್ತಿಗಳು ಬಳಕೆಯಾಗದಂತೆ ಕ್ರಮ ವಹಿಸಬೇಕು
ಸ್ವರೂಪ ಟಿ.ಕೆ. ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.