ಉಡುಪಿ: ವಾಣಿಜ್ಯ ಮತ್ತು ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರ ಏರಿಕೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ನಗರದ ಬ್ರಹ್ಮಗಿರಿ ಸರ್ಕಲ್ನಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

ಪಕ್ಷದ ಮುಖಂಡ ಎಂ.ಎ.ಗಫೂರ್ ಮಾತನಾಡಿ, ‘ಕೇಂದ್ರ ಸರ್ಕಾರವು ಅಡುಗೆ ಅನಿಲ ದರ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಅನ್ಯಾಯ ಮಾಡಿದೆ. ತಕ್ಷಣ ಅಡುಗೆ ಅನಿಲ ದರ ಇಳಿಕೆ ಮಾಡಬೇಕು’ ಎಂದು ಆಗ್ರಹಿಸಿದರು.

‘ದರ ಏರಿಕೆಯಿಂದಾಗಿ ಜನರು ಮತ್ತೆ ಕಟ್ಟಿಗೆ ಒಲೆಯ ಮೊರೆ ಹೋಗುವಂತೆ ಮಾಡಲು ಬಿಜೆಪಿ ಯತ್ನಿಸುತ್ತಿದೆ’ ಎಂದು ಆರೋಪಿಸಿದರು.

‘ನಮ್ಮಲ್ಲಿ ಇಂಧನ ಕೊರತೆಯಾಗದು ಎಂದು ಕೇಂದ್ರ ಪೆಟ್ರೋಲಿಯಂ ಸಚಿವರು ಆರಂಭದಲ್ಲಿ ಹೇಳಿದ್ದರು. ಆದರೆ ಯುದ್ಧ ಆರಂಭವಾಗಿ ಕೆಲವೇ ದಿನಗಳಲ್ಲಿ ಅಡುಗೆ ಅನಿಲ ದರ ಏರಿಕೆ ಮಾಡಲಾಗಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆ ಸ್ಥಗಿತಗೊಂಡಿರುವುದರಿಂದ ಸಣ್ಣ ಸಣ್ಣ ಹೋಟೆಲ್ನವರು ಸಂಕಷ್ಟ ಅನುಭವಿಸುವಂತಾಗಿದೆ’ ಎಂದು ಹೇಳಿದರು.

‘ಸುಳ್ಳು ಆಶ್ವಾಸನೆಗಳೊಂದಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ಜನರಿಗೆ ಅನ್ಯಾಯ ಮಾಡುತ್ತಿದೆ. ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲೂ ವಿಫಲವಾಗಿದೆ’ ಎಂದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬಡವರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ ಅನ್ಯಾಯ ಮಾಡುತ್ತಿದೆ. ನಮ್ಮ ದೇಶವು ಅಮೆರಿಕದ ಮುಂದೆ ಕಂಗಾಲಾಗಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದರು.

ವೆರೋನಿಕಾ ಕರ್ನೆಲಿಯೋ ಮಾತನಾಡಿ, ‘ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ತುರ್ತು ಸಂದರ್ಭದಲ್ಲಿ ಜನರ ಮೇಲೆ ಹೊರೆ ಬೀಳದಂತೆ ನಿಭಾಯಿಸುತ್ತಿತ್ತು. ಬಿಜೆಪಿ ಸರ್ಕಾರವು ಕಚ್ಚಾ ತೈಲದ ಬೆಲೆ ಏರಿಕೆಯಾಗದಿದ್ದರೂ ಅಡುಗೆ ಅನಿಲದ ದರ ಏರಿಕೆ ಮಾಡಿದೆ’ ಎಂದು ತಿಳಿಸಿದರು.

‘ರಾಜ್ಯದ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರೆಂಟಿಗಳ ಮೂಲಕ ಜನರ ಹೊರೆ ಕಡಿಮೆ ಮಾಡಿದರೆ, ಕೇಂದ್ರದ ಬಿಜೆಪಿ ಸರ್ಕಾರವು ಜಿಎಸ್ಟಿ, ತೆರಿಗೆ ಮೂಲಕ ಜನರಿಗೆ ಕಷ್ಟ ಕೊಡುತ್ತಿದೆ’ ಎಂದು ಆರೋಪಿಸಿದರು.

ಪ್ರಮುಖರಾದ ದಿನೇಶ್ ಹೆಗ್ಡೆ ಮಳವಳ್ಳಿ, ಹರೀಶ್ ಕಿಣಿ, ಶಂಕರ್ ಕುಂದರ್, ಗೋಪಿನಾಥ್ ಭಟ್, ಭುಜಂಗ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಪ್ರಖ್ಯಾತ್ ಶೆಟ್ಟಿ , ಶಬ್ಬಿರ್ ಅಹ್ಮದ್, ಕೀರ್ತಿ ಶೆಟ್ಟಿ, ಪ್ರಶಾಂತ ಜತ್ತಣ್ಣ, ಮಹಾಬಲ ಕುಂದರ್, ಕಿರಣ್ ಹೆಗ್ಡೆ, ಜಯಕುಮಾರ್, ಮಮತಾ ಶೆಟ್ಟಿ, ಸುಕನ್ಯ, ಮೀನಾಕ್ಷಿ ಮಾಧವ ಬನ್ನಂಜೆ, ಪ್ರಭಾ, ರೋಶನ್ ಶೆಟ್ಟಿ ಉಪಸ್ಥಿತರಿದ್ದರು

ಕಟ್ಟಿಗೆ ಒಲೆಯಲ್ಲಿ ಚಹಾ ತಯಾರಿಸಿ ಪ್ರತಿಭಟನೆ ಕಾಂಗ್ರೆಸ್ ಕಚೇರಿಯಿಂದ ಬ್ರಹ್ಮಗಿರಿವರೆಗೆ ಮೆರವಣಿಗೆ

ಮಹಿಳಾ ದಿನಾಚರಣೆಯಂದೇ ಅಡುಗೆ ಅನಿಲ ದರ ಏರಿಕೆ ಮಾಡುವುದರ ಮೂಲಕ ಕೇಂದ್ರ ಸರ್ಕಾರವು ಮಹಿಳೆಯರ ಮೇಲೆ ಪ್ರಹಾರ ಮಾಡಿದೆ

–ಜ್ಯೋತಿ ಹೆಬ್ಬಾರ್ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.