ಉಡುಪಿ: ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಬ್ರಹ್ಮಗಿರಿ ಸರ್ಕಲ್ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಪಂಚರಾಜ್ಯಗಳಲ್ಲಿ ಚುನಾವಣೆ ಮುಗಿಯುತ್ತಿದ್ದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನರ ಮೇಲೆ ಹೊರೆ ಹೊರಿಸಿದೆ ಎಂದರು.

ಹಿಂದೆಂದೂ ಇಷ್ಟು ಪ್ರಮಾಣದಲ್ಲಿ ದರ ಏರಿಕೆ ಆಗಿರಲಿಲ್ಲ. ಬೆಲೆ ಏರಿಕೆಯಾಗದಂತೆ ಹಿಂದಿನ ಸರ್ಕಾರಗಳು ಆಡಳಿತದಲ್ಲಿ ಸಮತೋಲನ ಕಾಯ್ದುಕೊಂಡಿದ್ದವು ಎಂದು ಹೇಳಿದರು.

ವಿದೇಶಾಂಗ ನೀತಿಯಲ್ಲಿ ಕೇಂದ್ರ ಸರ್ಕಾರವು ಸಂಪೂರ್ಣ ವಿಫಲವಾಗಿರುವುದರಿಂದ ದಿನದಿಂದ ದಿನಕ್ಕೆ ದಿನಬಳಕೆಯ ಸಾಮಗ್ರಿಗಳ ದರ ಏರಿಕೆಯಾಗುತ್ತಿದೆ. ಅಡುಗೆ ಅನಿಲದ ದರ ಏರಿಕೆಯನ್ನು ಸರ್ಕಾರ ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದರು.

ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ಅಲಭ್ಯತೆ ಹಾಗೂ ದರ ಏರಿಕೆಯಿಂದ ಹಲವು ಹೋಟೆಲ್ಗಳು ಬಾಗಿಲು ಮುಚ್ಚದ್ದು, ಅದರಲ್ಲಿ ದುಡಿಯುತ್ತಿದ್ದ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಬಿಜೆಪಿಯು ಪೊಳ್ಳು ಭರವಸೆಗಳು ಹಾಗೂ ಕುಟಿಲ ತಂತ್ರದಿಂದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

ಗ್ಯಾಸ್ ಸಿಲಿಂಡರ್ ದರ ಏರಿಕೆಯಾಗಿರುವುದರಿಂದ ಕೇವಲ ಹೋಟೆಲ್ ಮಾಲೀಕರು ಮಾತ್ರ ಸಂಕಷ್ಟ ಅನುಭವಿಸುವುದಲ್ಲ. ಜನರಿಗೂ ಅದರ ಬಿಸಿ ತಟ್ಟುತ್ತಿದೆ. ಹೋಟೆಲ್ಗಳಲ್ಲಿ ಆಹಾರ ಪದಾರ್ಥಗಳ ದರ ಏರಿಕೆಯಾಗಲಿದೆ ಎಂದರು.

ಅಡುಗೆ ಅನಿಲ ಸಮಸ್ಯೆಯಿಂದಾಗಿ ಉಡುಪಿಯಲ್ಲಿ ಸುಮಾರು 53 ಹೋಟೆಲ್ಗಳು ಬಂದ್ ಆಗಿವೆ. ಕೇಂದ್ರ ಸರ್ಕಾರವು ಉದ್ಯಮಿಗಳಿಗೆ ಅನುಕೂಲವಾಗಲು ದರ ಏರಿಕೆ ಮಾಡುತ್ತದೆ ಎಂದು ಆರೋಪಿಸಿದರು.

ಸುರಯ್ಯ ಅಂಜುಂ ಮಾತನಾಡಿ, ಕಚ್ಚಾತೈಲದ ಬೆಲೆ ಕಡಿಮೆಯಾಗಿದ್ದಾಗ ಜನರಿಗೆ ಅದರ ಪ್ರಯೋಜನ ಸಿಕ್ಕಿಲ್ಲ. ಈಗ ಹೆಚ್ಚಾದಾಗ ಅದರ ಹೊರೆಯನ್ನು ಜನರ ಮೇಲೆ ಹೊರಿಸಲಾಗುತ್ತಿದೆ ಎಂದರು.

ಪ್ರಮುಖರಾದ ನಾಗೇಶ್ ಉದ್ಯಾವರ, ಕೃಷ್ಣ ಶೆಟ್ಟಿ, ಹರೀಶ್ ಕಿಣಿ, ಜ್ಯೋತಿ ಹೆಬ್ಬಾರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-29-1562254646

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.