ಗುರುವಾರ , ಜುಲೈ 29, 2021
21 °C
44 ಮಂದಿಗೆ ಮುಂಬೈ ಸಂಪರ್ಕ, ಲ್ಯಾಬ್‌ ಟೆಕ್ನಿಷಿಯನ್‌ ಮಗುವಿಗೂ ಸೋಂಕು

ಉಡುಪಿ: ಮತ್ತೆ 45 ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಜಿಲ್ಲೆಯಲ್ಲಿ ಸೋಮವಾರ ಮತ್ತೆ 45 ಮಂದಿಯಲ್ಲಿ ಕೋವಿಡ್‌–19 ಸೋಂಕು ದೃಢಪಟ್ಟಿದೆ. 44 ಸೋಂಕಿತರು ಮುಂಬೈನಿಂದ ಬಂದವರಾಗಿದ್ದರೆ, ಒಬ್ಬರು ಸ್ಥಳೀಯರು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಮಾಹಿತಿ ನೀಡಿದರು.

ಸೋಂಕಿತರಲ್ಲಿ 30 ಪುರುಷರು, 11 ಮಹಿಳೆಯರು ಹಾಗೂ ನಾಲ್ವರು ಮಕ್ಕಳು ಇದ್ದಾರೆ. ಕುಂದಾಪುರದ 33, ಉಡುಪಿಯ 9 ಹಾಗೂ ಕಾರ್ಕಳದ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಹೊರ ರಾಜ್ಯಗಳಿಂದ ಜಿಲ್ಲೆಗೆ ಬಂದಿದ್ದ ಎಲ್ಲರ ಕಫದ ಮಾದರಿ ಪರೀಕ್ಷೆಗಳು ಮುಗಿದಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 113 ಜನರ ವರದಿ ನೆಗೆಟಿವ್ ಬಂದಿದ್ದು, ಅವರನ್ನೆಲ್ಲ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತಿದೆ ಎಂದು ವಿವರ ನಿಡಿದರು.

ಇದುವರೆಗೂ 387 ಮಂದಿ ಗುಣಮುಖರಾಗಿದ್ದು, ಇವರೆಲ್ಲ 14 ದಿನ ಮತ್ತೆ ಹೋಂಕ್ವಾರಂಟೈನ್‌ನಲ್ಲಿರಲಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವವರಿಗೆ 7 ದಿನಗಳ ಬಳಿಕ ಪರೀಕ್ಷೆ ನಡೆಸಿ ನೆಗೆಟಿವ್ ಬಂದರೆ ಡಿಸ್‌ಚಾರ್ಜ್‌ ಮಾಡಲಾಗುವುದು ಎಂದರು.

ಮಗುವಿಗೆ ಸೋಂಕು:

ಭಾನುವಾರ ಲ್ಯಾಬ್ ಟೆಕ್ನಿಷಿಯನ್‌ಗೆ ಕೋವಿಡ್ ಸೋಂಕು ತಗುಲಿತ್ತು. ಸೋಮವಾರ ಅವರ ಮಗುವಿಗೂ ಸೋಂಕು ಕಾಣಿಸಿಕೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿವರ ನೀಡಿದರು.

ಸೋಂಕಿತರ ಸಂಖ್ಯೆ 947ಕ್ಕೇರಿಕೆ:

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 947ಕ್ಕೇರಿಕೆಯಾಗಿದ್ದು, 628 ಸಕ್ರಿಯ ಪ್ರಕರಣಗಳಿವೆ. ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು