ಬುಧವಾರ, ಜೂನ್ 16, 2021
23 °C
375 ಮಂದಿಗೆ ಸೋಂಕು; ಉಡುಪಿಯಲ್ಲಿ ಅತಿ ಹೆಚ್ಚು 215

ಉಡುಪಿ: 9,000 ದಾಟಿದ ಸೋಂಕಿತರ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಬುಧವಾರ 375 ಮಂದಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ 9000ದ ಗಡಿ ದಾಟಿದೆ. 

ಸೋಂಕಿತರಲ್ಲಿ ಉಡುಪಿ ತಾಲ್ಲೂಕಿನ 215, ಕುಂದಾಪುರದ 131, ಕಾರ್ಕಳ ತಾಲ್ಲೂಕಿನ 27 ಹಾಗೂ ಇಬ್ಬರು ಬೇರೆ ಜಿಲ್ಲೆಯವರು ಇದ್ದಾರೆ. ಪ್ರಾಥಮಿಕ ಸಂಪರ್ಕದಿಂದ 205, ಶೀತಜ್ವರ ಲಕ್ಷಣಗಳಿದ್ದ 67, ತೀವ್ರ ಉಸಿರಾಟದ ಸಮಸ್ಯೆಯಿದ್ದ 5 ಹಾಗೂ ಹೊರ ಜಿಲ್ಲೆಗಳ ಪ್ರಯಾಣ ಹಿನ್ನೆಲೆಯ ಐವರಲ್ಲಿ ಸೋಂಕು ಕಾಣಿಸಿಕೊಂಡಿದೆ. 93 ಜನರಿಗೆ ಸೋಂಕು ತಗುಲಿದ್ದು ಹೇಗೆ ಎಂದು ಪತ್ತೆಯಾಗಿಲ್ಲ. 

99 ರೋಗಿಗಳಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದರೆ, 276 ಸೋಂಕಿತರಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಚಿಕಿತ್ಸೆ ಅಗತ್ಯವಿದ್ದ 93 ಮಂದಿಗೆ ಕೋವಿಡ್‌ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್ ಕೇಂದ್ರಗಳಲ್ಲಿ, ಮನೆಯಲ್ಲಿ ವಾಸಕ್ಕೆ ಪ್ರತ್ಯೇಕ ವ್ಯವಸ್ಥೆ ಹೊಂದಿರುವ 282 ಜನರಿಗೆ ಹೋಂ ಐಸೊಲೇಷನ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

1,597 ಮಾದರಿ ಸಂಗ್ರಹ:

ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಾಗೂ ಪ್ರಾಥಮಿಕ ಸಂಪರ್ಕಕ್ಕೆ ಬಂದ 1,597 ಶಂಕಿತರನ್ನು ಕೋವಿಡ್‌ ಪರೀಕ್ಷೆಗೊಳಪಡಿಸಿ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಬುಧವಾರದ ಕೈಸೇರಿದ ವರದಿಯಲ್ಲಿ 1,608 ನೆಗೆಟಿವ್‌ ಹಾಗೂ 375 ಪಾಸಿಟಿವ್ ಇವೆ. 700 ವರದಿಗಳು ಬರಬೇಕಿದೆ.  

181 ಗುಣಮುಖ:

ಸೋಂಕಿನಿಂದ ಗುಣಮುಖರಾದ 181 ಮಂದಿ ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ ಸೋಂಕಿನಿಂದ ಗುಣರಾದವರ ಸಂಖ್ಯೆ 6,132 ಆಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,831 ಇವೆ. ಇವರಲ್ಲಿ 1,303 ಆಸ್ಪತ್ರೆಗಳಲ್ಲಿ, 1,528 ಹೋಂ ಐಸೊಲೇಷನ್‌ನಲ್ಲಿದ್ದಾರೆ. 78 ಸೋಂಕಿತರು ಮೃತಪಟ್ಟಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು