ಬುಧವಾರ, ಆಗಸ್ಟ್ 5, 2020
22 °C

ಚಿಕಿತ್ಸೆಗೆ ಬಂದಿದ್ದ ದಾವಣಗೆರೆಯ ಸೋಂಕಿತ ವೃದ್ಧ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ದಾವಣಗೆರೆಯಿಂದ ಮಣಿಪಾಲಕ್ಕೆ ಚಿಕಿತ್ಸೆ ಪಡೆಯಲು ಬಂದಿದ್ದ ಕೋವಿಡ್‌ ಸೋಂಕಿತ ವೃದ್ಧರೊಬ್ಬರು ಶುಕ್ರವಾರ ರಾತ್ರಿ ಮೃತಪಟ್ಟಿರುವುದನ್ನು ವೈದ್ಯಾಧಿಕಾರಿ ಭಾನುವಾರ ದೃಢಪಡಿಸಿದ್ದಾರೆ.

ಹೃದ್ರೋಗ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ 70 ವರ್ಷ ವಯಸ್ಸಿನ ವ್ಯಕ್ತಿಯನ್ನು ಸಂಬಂಧಿಕರು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆತಂದಿದ್ದರು. ಅಲ್ಲಿ ಕೋವಿಡ್‌ ಪರೀಕ್ಷೆ ನಡೆಸಿದಾಗ ಸೋಂಕು ಇರುವುದು ದೃಢಪಟ್ಟಿತ್ತು. ವೃದ್ಧರನ್ನು ಉಡುಪಿಯ ಡಾ.ಟಿಎಂಎ ಪೈ ಕೋವಿಡ್‌ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ವೃದ್ಧ ಮೃತಪಟ್ಟಿದ್ದಾರೆ.

ಕೋವಿಡ್‌ ಮಾರ್ಗಸೂಚಿಯಂತೆ ಭಾನುವಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸುಧೀರ್ ಚಂದ್ರ ಸೂಡ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.