ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: 27 ಮಂದಿಯಲ್ಲಿ ಕೋವಿಡ್‌ ಸೋಂಕು

Last Updated 28 ಮೇ 2020, 11:22 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯಲ್ಲಿ ಗುರುವಾರ 27 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. 18 ಪುರುಷರು ಹಾಗೂ 9 ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದ್ದು, ಎಲ್ಲರಿಗೂ ಡಾ.ಟಿಎಂಎ ಪೈ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.

ಮಹಾರಾಷ್ಟ್ರದಿಂದ 24, ತೆಲಂಗಾಣದಿಂದ ಇಬ್ಬರು ಹಾಗೂ ಕೇರಳದಿಂದ ಬಂದಿದ್ದ ಒಬ್ಬರಲ್ಲಿ ಸೋಕು ಕಾಣಿಸಿಕೊಂಡಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಸಹ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದರು.

7 ದಿನ ಕ್ವಾರಂಟೈನ್‌ ಪೂರೈಸಿದರೆ ಮನೆಗೆ:

ವಿದೇಶ ಹಾಗೂ ಹೊರ ರಾಜ್ಯಗಳಿಂದ ಜಿಲ್ಲೆಗೆ ಬಂದು 7 ದಿನ ಸಾಂಸ್ಥಿಕ ಕ್ವಾರಂಟೈನ್‌ ಅವಧಿ ಪೂರ್ಣಗೊಳಿಸಿದವರನ್ನು ಮನೆಗೆ ಕಳುಹಿಸಲಾಗುತ್ತಿದ್ದು, ಮತ್ತೆ 7 ದಿನ ಹೋಂ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗಿದೆ. ಈ ಅವಧಿಯಲ್ಲಿ ಹೋಂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದರೆ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಹೋಂ ಕ್ವಾರಂಟೈನ್‌ಗೆ ಹೋಗುವವರು ಕಡ್ಡಾಯವಾಗಿ ಕ್ವಾರಂಟೈನ್ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಬೇಕು. ಈ ಆ್ಯಪ್‌ನಲ್ಲಿ ಜಿಯೋ ಫೆನ್ಸಿಂಗ್ ವ್ಯವಸ್ಥೆಯಿದ್ದು, ವ್ಯಕ್ತಿ ಮನೆಬಿಟ್ಟು ಹೊರಬಂದರೆ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗುತ್ತದೆ. ಮೊದಲ ಬಾರಿ ನಿಯಮ ಉಲ್ಲಂಘಿಸಿದರೆ ಎಚ್ಚರಿಕೆ ಕೊಟ್ಟು, ಎರಡನೇ ಬಾರಿ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.

14 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದವರನ್ನು ಮನೆಗೆ ಕಳುಹಿಸಲಾಗುತ್ತಿದ್ದು, ಇವರೆಲ್ಲ ಮುಂದಿನ 14 ದಿನಗಳ ರಿಪೋರ್ಟಿಂಗ್ ಅವಧಿಯಲ್ಲಿ ಎಚ್ಚರವಾಗಿರಬೇಕು. ಈ ಸಂದರ್ಭ ಜ್ವರ, ಶೀತ ಸೇರಿದಂತೆ ಯಾವುದೇ ರೋಗದ ಲಕ್ಷಣಗಳು ಕಂಡುಬಂದರೆ ತಕ್ಷಣ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT