ಉಡುಪಿ: ಕ್ರೇನ್ ಢಿಕ್ಕಿಯಾಗಿ ರಸ್ತೆ ದಾಟಲು ನಿಂತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉದ್ಯಾವರ ಗ್ರಾಮದ ಹೋಟೆಲ್ ಲಲಿತ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಸಂಜೆ ನಡೆದಿದೆ. ಕಾರವಾರ ಮೂಲದ ದಿವ್ಯ ಎಸ್. ರಾಯ್ಕರ್ (45) ಮೃತಪಟ್ಟವರು.

ಇವರು ಚಾಲಕ ಹಾಗೂ ಮಗಳ ಜೊತೆ ಕಾರಿನಲ್ಲಿ ಮಂಗಳೂರಿನ ಆಸ್ಪತ್ರೆಯಿಂದ ಹೊರಟಿದ್ದು, ದಾರಿ ಮಧ್ಯೆ ಉದ್ಯಾವರದಲ್ಲಿ ಹೋಟೆಲ್ ಎದುರು ಕಾರು ನಿಲ್ಲಿಸಿದ್ದರು. ಅಲ್ಲಿ ಮಗನಿಗೆ ಬ್ಯಾಟ್ ಖರೀದಿಸಲು ರಸ್ತೆ ದಾಟಲು ನಿಂತಿದ್ದ ದಿವ್ಯ ಅವರಿಗೆ ಮಂಗಳೂರು ಕಡೆಗೆ ಹೋಗುತ್ತಿದ್ದ ಕ್ರೇನ್ ಢಿಕ್ಕಿ ಹೊಡೆದಿದೆ ಎಂದು ಮೂಲಗಳು ತಿಳಿಸಿವೆ.ತೀವ್ರವಾಗಿ ಗಾಯಗೊಂಡಿದ್ದಅವರನ್ನು ತಕ್ಷಣ ಉಡುಪಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-28-2101528073

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.