ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಇನ್ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಗೃಹರಕ್ಷಕ ದಳದ ಬೆಂಗಳೂರು ಕಚೇರಿಯ ಉದ್ಯೋಗಿ ಸಂಪತ್ ಸಾಲಿಯಾನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

‘ಸಿ.ಎಂ. ಸಿದ್ದರಾಮಯ್ಯರನ್ನು ಕೊಂದರೆ ಹಿಂದೂಗಳಿಗೆ ನೆಮ್ಮದಿ’ ಎಂದು ಈತ ಮೇ 2ರಂದು ಇನ್ಸ್ಟಾಗ್ರಾಂನಲ್ಲಿ ಸಂಪು ಎಸ್. ಸಾಲಿನ್ ಎಂಬ ಖಾತೆಯಲ್ಲಿ ಪೋಸ್ಟ್ ಮಾಡಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.

ದ್ವೇಷ ಭಾವನೆ ಹರಡುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ಕಾರಣಕ್ಕೆ ಈತನನ್ನು ಬಂಧಿಸಲಾಗಿದೆ ಎಂದೂ ಹೇಳಿದ್ದಾರೆ.

ಕುಕ್ಕುಂದೂರಿನ ಸೂರಜ್ ಎಂಬುವವರು ನೀಡಿರುವ ದೂರಿನ ಅಧಾರದಲ್ಲಿ ಸಂಪತ್ ವಿರುದ್ದ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.