ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಆಯುರ್ವೇದ ಚಿಕಿತ್ಸೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಉಡುಪಿಯ ಕುತ್ಪಾಡಿಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರೋಗ ನಿರ್ಣಾಯಕ ಘಟಕದ ವಿನೂತನ ಮಾದರಿಯ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಳಗೊಂಡ ಸೌಲಭ್ಯಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಖಾಸಗಿ ವಲಯದ ಕಾಲೇಜುಗಳಲ್ಲಿ ಎಸ್ಡಿಎಂ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಇಲ್ಲಿ ಅದ್ಭುತವಾದ ಕೆಲಸ ನಡೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ಅಲೋಪತಿಗಿಂತ ಆಯುರ್ವೇದದ ಮೇಲೆ ಹೆಚ್ಚು ವಿಶ್ವಾಸ ಬಂದಿದೆ ಎಂದು ಹೇಳಿದರು

ಕಾಲೇಜಿನ ಪ್ರಾಂಶುಪಾಲೆ ಮಮತಾ, ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ್ ಎಸ್., ಕಾಲೇಜಿನ ನಿರ್ದೇಶಕ ಪ್ರಸನ್ನ ರಾವ್, ಫಾರ್ಮಸಿ ವಿಭಾಗದ ಮುಖ್ಯಸ್ಥ ಮುರಳೀಧರ್ ಬಲ್ಲಾಳ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.