ಉಡುಪಿ: ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ಮರಗಳನ್ನು ಕಡಿದಿರುವುದಕ್ಕೆ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏ. 24ರಂದು ಕಚೇರಿ ಸಿಬ್ಬಂದಿಯೊಬ್ಬರು ಜಿಲ್ಲಾಧಿಕಾರಿ ಕಚೇರಿ ಆವರಣದ ಮರದಿಂದ ಮಾವಿನಕಾಯಿ ಕೊಯ್ಯುವಾಗ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟಿದ್ದರು.

ಇದೀಗ ಮರಗಳಿರುವ ಪ್ರದೇಶದಿಂದ ವಿದ್ಯುತ್ ತಂತಿಗಳನ್ನು ಬೇರೆಡೆಗೆ ವರ್ಗಾಯಿಸುವ ಬದಲು ಮರಗಳನ್ನೇ ಕಡಿದು ಹಾಕಿರುವುದು ಸರಿಯಲ್ಲ ಎಂದು ಪರಿಸರ ಪ್ರೇಮಿಗಳು ಹೇಳಿದ್ದಾರೆ. ಮೊದಲೇ ಬಿಸಿಲಿನ ಧಗೆ ಹೆಚ್ಚಾಗುತ್ತಿದೆ ಇಂತಹ ಪರಿಸ್ಥಿತಿಯಲ್ಲಿ ಹಲವು ಬಗೆಯ ಪಕ್ಷಿಗಳಿಗೆ ಆಶ್ರಯವಾಗಿದ್ದ ಹಣ್ಣಿನ ಮರಗಳನ್ನು ಕಡಿದಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

‘ಕಚೇರಿ ನೌಕರರೊಬ್ಬರು ವಿದ್ಯುತ್ ಆಘಾತದಿಂದ ಮೃತಪಟ್ಟಿರುವುದು ತೀರಾ ಬೇಸರದ ಸಂಗತಿ. ಈ ವಿಚಾರವನ್ನೇ ಮುಂದಿಟ್ಟುಕೊಂಡು ವಿವೇಚನೆ ಇಲ್ಲದೆ ಮರಗಳನ್ನು ಕಡಿಯುವ ಮೂಲಕ ಪರಿಸರಕ್ಕೆ ಹಾನಿ ಎಸಗಿರುವುದು ಸರಿಯಲ್ಲ’ ಎಂದು ಪರಿಸರ ಕಾರ್ಯಕರ್ತ ಪ್ರೇಮಾನಂದ ಕಲ್ಮಾಡಿ ತಿಳಿಸಿದ್ದಾರೆ.

‘ಇದನ್ನೇ ಮಾದರಿಯಾಗಿಟ್ಟುಕೊಂಡು ಬೇರೆ ಕಡೆಗಳಲ್ಲೂ ಮರಗಳನ್ನು ಕಡಿಯುವ ಸಾಧ್ಯತೆ ಇರುತ್ತದೆ. ಮರಗಳ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಗಳನ್ನು ಬೇರೆಡೆಗೆ ವರ್ಗಾಯಿಬೇಕಿತ್ತು. ಆದರೆ ಮರಗಳನ್ನೇ ಕಡಿದು ಹಾಕಿರುವುದು ಅಕ್ಷಮ್ಯ’ ಎಂದು ಅವರು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-28-335698831

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.