ಶುಕ್ರವಾರ, ಜೂನ್ 18, 2021
24 °C

ಮಾಸ್ಕ್ ಧರಿಸದೆ ಫೋಟೊಗೆ ಪೋಸ್‌ ನೀಡಿದ ಉಡುಪಿ ಡಿಸಿ: ಜಾಲತಾಣಗಳಲ್ಲಿ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಎಎಸ್‌ಪಿ ಕುಮಾರಚಂದ್ರ ಅವರ ಪುತ್ರಿಯ ಮೆಹಂದಿ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸದೆ ಫೋಟೊಗೆ ಫೋಸ್ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ವ್ಯಕ್ತವಾಗಿವೆ.

ಸರ್ಕಾರದ ನಿಯಮಗಳಿರುವುದು ಕೇವಲ ಸಾರ್ವಜನಿಕರಿಗೆ ಮಾತ್ರವೇ, ಜಿಲ್ಲಾಧಿಕಾರಿಗೆ, ಸರ್ಕಾರಿ ಅಧಿಕಾರಿಗಳಿಗೆ ಅನ್ವಯವಾಗುವುದಿಲ್ಲವೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕರ್ಫ್ಯೂ, ವೀಕೆಂಡ್ ಕರ್ಫ್ಯೂ, ನಿಷೇಧಾಜ್ಞೆಯಂತಹ ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದು, ಇವೆಲ್ಲವನ್ನು ಅನುಷ್ಠಾನಕ್ಕೆ ತರಬೇಕಾದ ಜಿಲ್ಲಾಧಿಕಾರಿಯೇ ನಿಯಮ ಉಲ್ಲಂಘಿಸಿರುವುದು ಖಂಡನೀಯ ಎಂದು ಹಲವರು ಟೀಕಿಸಿದ್ದಾರೆ.

ಇದನ್ನೂ ಓದಿ: ಬಸ್‌ಗಳಲ್ಲಿ ಸೀಟು ಸಿಗುವುದಿಲ್ಲ, ಮನೆಗೆ ಹೋಗುವುದು ಹೇಗೆ: ವಿದ್ಯಾರ್ಥಿನಿ ಬೇಸರ

ಮದುವೆ ಹಾಗೂ ಇತರೆ ಶುಭ ಸಮಾರಂಭಗಳಿಗೆ 50 ಮಂದಿ ಮಾತ್ರ ಸೇರಲು ಅನುಮತಿ ಎಂಬ ನಿಯಮ ಪಾಲನೆ ಆಗಿದೆಯೇ ಎಂದು ಹಲವರು ಪ್ರಶ್ನಿಸಿದ್ದಾರೆ.

ಈಚೆಗೆ ಉಡುಪಿ ಜಿಲ್ಲಾಧಿಕಾರಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಬಸ್‌ಗಳ ವಿರುದ್ಧ ಈಚೆಗೆ ಕಾರ್ಯಾಚರಣೆ ನಡೆಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಬಸ್‌ನಲ್ಲಿ ನಿಂತು ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರನ್ನು ಬಸ್‌ನಿಂದ ಕೆಳಗಿಸಿದ್ದರು. ಬಸ್‌ನಿಂದ ಇಳಿಸಿದರೆ ಮನೆ ತಲುಪುವುದು ತಡವಾಗುತ್ತದೆ ಎಂದು ವಿದ್ಯಾರ್ಥಿನಿ ಬೇಸರ ವ್ಯಕ್ತಪಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿತ್ತು. ಹಲವರು ಜಿಲ್ಲಾಧಿಕಾರಿ ನಡೆಯನ್ನು ಟೀಕಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು