ಉಡುಪಿ: ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರ ಆದೇಶದಂತೆ ಹೊರಜಿಲ್ಲೆಗೆ ಗಡೀಪಾರಿಗೆ ಒಳಗಾಗಿದ್ದ ಫೈಝಲ್ ಎಂಬಾತನನ್ನು ಕಾರ್ಕಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಈತ ಮಲ್ಪೆ ಠಾಣಾ ವ್ಯಾಪ್ತಿಯಲ್ಲಿರುವುದನ್ನು ಖಚಿತಪಡಿಸಿಕೊಂಡು ಗಡೀಪಾರು ಆದೇಶ ಜಾರಿಗಾಗಿ ಮಲ್ಪೆ ಪೊಲೀಸರು ಪಡುತೋನ್ಸೆ ಗ್ರಾಮದ ಹೂಡೆ ನಾಗಬ್ರಹ್ಮ ಬಬ್ಬುಸ್ವಾಮಿ ದೈವಸ್ಥಾನದ ಬಳಿಗೆ ಹೋದಾಗ, ಆರೋಪಿ ತಾನು ಕುಳಿತಿದ್ದ ಕಾರನ್ನು ಒಮ್ಮೆಗೆ ಹಿಮ್ಮುಖವಾಗಿ ಚಲಾಯಿಸಿ ರಸ್ತೆ ಪಕ್ಕದಲ್ಲಿದ್ದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಓಡಿ ಹೋಗಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಆತನ ವಿರುದ್ಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಆತ ಬಿಟ್ಟು ಹೋದ ಕಾರಿನ ಮಹಜರು ಪ್ರಕ್ರಿಯೆ ನಡೆಸುವಾಗ ಅದರಲ್ಲಿ 173.42 ಗ್ರಾಂ ಗಾಂಜಾ ಪತ್ತೆಯಾಗಿತ್ತು. ಅದರೊಂದಿಗೆ ದೊರೆತ ಎರಡು ಮೊಬೈಲ್ಗಳನ್ನು ಸಹ ವಶಪಡಿಸಿಕೊಳ್ಳಲಾಗಿತ್ತು. ಆರೋಪಿ ಫೈಝಲ್ ಮತ್ತೊಬ್ಬ ಆರೋಪಿಯೊಂದಿಗೆ ಸೇರಿ ಅಕ್ರಮವಾಗಿ ಮಾದಕ ವಸ್ತು ಇಟ್ಟುಕೊಂಡು ಮಾರಾಟ ಮಾಡಲು ಕಾಯುತ್ತಿದ್ದುದಾಗಿ ತಿಳಿದುಬಂದಿತ್ತು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಕಾರ್ಕಳದ ಬಂಗ್ಲಗುಡ್ಡೆ ಕಸಬ ನಿವಾಸಿ ಫೈಝಲ್ನ್ನು ಕಾರ್ಕಳ ಪೊಲೀಸ್ ಉಪನಿರೀಕ್ಷಕರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-28-1226376635

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.