ಉಡುಪಿ: ಜಿಲ್ಲಾ ಮಾನವ ಅಭಿವೃದ್ಧಿ ವರದಿ– 2025, ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ– 2031 ವರದಿಯನ್ನು ಸಿದ್ಧಪಡಿಸಲು ಅಧಿಕಾರಿಗಳು ಕಾಳಜಿ ವಹಿಸುವುದರೊಂದಿಗೆ ನಿಖರ ದತ್ತಾಂಶವನ್ನು ಕಾಲಮಿತಿಯೊಳಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚಿಸಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ– 2025, ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ– 2031 ವರದಿ ಸಿದ್ಧಪಡಿಸುವ ಕುರಿತು ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೋಮವಾರ ನಡೆದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವರದಿಯು ಪ್ರಮುಖ ದಾಖಲೆಯಾಗಿದ್ದು, ಎಲ್ಲಾ ಇಲಾಖೆಗಗಳ ಅಧಿಕಾರಿಗಳು ತಯಾರಿಕೆ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡು ಸಂಬಂಧಿಸಿದ ದಾಖಲೆಗಳನ್ನು ಕ್ಲಪ್ತ ಸಮಯದಲ್ಲಿ ಒದಗಿಸಿ ಗ್ರಾಮ ಪಂಚಾಯಿತಿ ಹಂತದಿಂದಲೇ ಮಾನವ ಅಭಿವೃದ್ಧಿಗೆ ಒತ್ತು ನೀಡುವಂತಾಗಬೇಕು ಎಂದರು.

ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ– 2031 ವರದಿಗಾಗಿ ಹಲವು ಅಂಶಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದ್ದು, ಶಿಕ್ಷಣ, ಆರೋಗ್ಯ, ಪೋಷಣಾ ಸ್ಥಿತಿ, ಮೂಲಸೌಕರ್ಯ, ಸಾಮಾಜಿಕ ಒಳಗೊಳ್ಳುವಿಕೆ, ಪರಿಸರದ ಸುಸ್ಥಿರತೆ ಸೇರಿದಂತೆ ವಿವಿಧ ಸೂಚ್ಯಂಕಗಳ ಆಧಾರದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವುದು ಈ ವರದಿಗಳ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು

ಅಧಿಕಾರಿಗಳು ದತ್ತಾಂಶ ಸಂಗ್ರಹ, ವಿಶ್ಲೇಷಣೆ, ಇಲಾಖಾವಾರು ಸಹಕಾರದೊಂದಿಗೆ ಮಾಹಿತಿ ಒದಗಿಸಬೇಕು. ಜಿಲ್ಲೆಯ ಸಮಗ್ರ, ಸಮತೋಲನೆಯ ಅಭಿವೃದ್ಧಿಗೆ ಇಲಾಖೆಗಳ ನಡುವೆ ಪರಸ್ಪರ ಸಮನ್ವಯತೆ ಅಗತ್ಯ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ವರದಿ ನೀಡುವಾಗ ಎಲ್ಲಾ ಇಲಾಖೆಗಳು ಮಾಹಿತಿಯೊಂದಿಗೆ ಭಾಗವಹಿಸಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿ, ನಿವೃತ್ತ ಜಂಟಿ ನಿರ್ದೇಶಕ ಶ್ರೀನಿವಾಸ್ ರಾವ್ ಮಾತನಾಡಿ, ಜಿಲ್ಲಾ ಮಾನವ ಅಭಿವೃದ್ಧಿ ವರದಿಗೆ ಅತ್ಯಂತ ಮಹ್ವತ್ವವಾದ ಮೌಲ್ಯವಿದೆ. ಜಿಲ್ಲೆ, ತಾಲ್ಲೂಕು ಮಟ್ಟದ ಅಧಿಕಾರಿಗಳು ಅಚ್ಚುಕಟ್ಟಾಗಿ ಸ್ಪಷ್ಟ ಮಾಹಿತಿ ನೀಡಿದರೆ ಜಿಲ್ಲೆಯು ಅಭಿವೃದ್ಧಿ ಹೊಂದಲು ಸಹಕಾರಿಯಾಗಲಿದೆ. ವರದಿಯೊಂದಿಗೆ ಸ್ಥಳೀಯ ಕಲೆ, ಸಂಸ್ಕೃತಿ, ವೇಷಭೂಷಣಗಳನ್ನು ಒಳಗೊಂಡ ಛಾಯಾಚಿತ್ರಗಳನ್ನು ನೀಡಿದರೆ ವರದಿಗೆ ಹೆಚ್ಚಿನ ಮಹತ್ವ ದೊರೆಯಲಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್, ಯೋಜನೆಯ ಅನುಷ್ಠಾನಾಧಿಕಾರಿಗಳು, ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.