ಉಡುಪಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಎಸ್ಸಿ ಕೇಂದ್ರಗಳಲ್ಲಿ ಡಿಜಿ-ಪೇ ಮೂಲಕ ಜನರು ತಮ್ಮ ಹಳ್ಳಿಯಲ್ಲಿಯೇ ಖಾತೆಯಿಂದ ಹಣ ಹಿಂಪಡೆಯುವ ಅವಕಾಶವಿದ್ದು, ಅದು ಗ್ರಾಮೀಣ ಭಾಗದ ಜನರಿಗೆ ವರದಾನವಾಗಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಉಡುಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಹೇಳಿದರು.

ಎಸ್ಕೆಡಿಆರ್ಡಿಪಿ ವತಿಯಿಂದ ಉಡುಪಿ ತಾಲ್ಲೂಕಿನ ಕೆಳಾರ್ಕಳಬೆಟ್ಟು ಸಿಎಸ್ಸಿ ಕೇಂದ್ರದಲ್ಲಿ ಡಿಜಿ-ಪೇ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಡಿಜಿ-ಪೇ ಕಾರ್ಯಕ್ರಮದಲ್ಲಿ ಹಣ ಹಿಂಪಡೆಯುವುದು ಸೇರಿದಂತೆ ವಿವಿಧ ಸೇವೆಗಳು ಲಭ್ಯ ಇವೆ ಎಂದರು. ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ, ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ, ದಿಲೀಪ್ ಜೈನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-28-397462217

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.