ಉಡುಪಿ: ಜ್ಞಾನ ಭಾರತಂ ಮಿಷನ್ ಯೋಜನೆಯಡಿ ದೇಶದಲ್ಲಿ ಶತಮಾನಗಳಷ್ಟು ಹಳೆಯ ಕೈ ಬರಹಗಳು, ಹಸ್ತ ಪ್ರತಿಗಳು ಹಾಗೂ ಮತ್ತಿತರ ದಾಖಲೆಗಳನ್ನು ತಂತ್ರಜ್ಞಾನದ ಮೂಲಕ ಶಾಶ್ವತವಾಗಿ ಉಳಿಸುವ ಡಿಜಿಟಲೀಕರಣ ಕಾರ್ಯವು ನಡೆಯುತ್ತಿದ್ದು, ಅದಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹೇಳಿದರು.

ಜ್ಞಾನ ಭಾರತಂ ಮಿಷನ್ ಯೋಜನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಾರ್ವಜನಿಕರು ತಮ್ಮಲ್ಲಿ ಹಳೆಯ ಕೈಬರಹ, ಹಸ್ತಪ್ರತಿ, ದಾಖಲೆಗಳು ಲಭ್ಯವಿದ್ದಲ್ಲಿ ನೇರವಾಗಿ ಜ್ಞಾನ ಭಾರತಂ ಆ್ಯಪ್ ಮೂಲಕ ಅಪ್ಲೋಡ್ ಮಾಡಬಹುದಾಗಿದೆ ಅಥವಾ ಮಾಹಿತಿ ನೀಡಿದಲ್ಲಿ ಸಮೀಕ್ಷೆದಾರರು ತಮ್ಮಲ್ಲಿಗೆ ಬಂದು ದಾಖಲಿಸಿಕೊಳ್ಳಲಿದ್ದಾರೆ ಎಂದರು.

ಜಿಲ್ಲೆಯ ಎಲ್ಲಾ ವಿಶ್ವವಿದ್ಯಾಲಯಗಳು, ವಸ್ತುಸಂಗ್ರಹಾಲಯಗಳು, ಸಂಘ-ಸಂಸ್ಥೆಗಳು, ಮಠಗಳು ಮತ್ತು ವ್ಯಕ್ತಿಗಳ ಬಳಿ ಇರುವಂತಹ ಹಸ್ತಪ್ರತಿಗಳನ್ನು ದಾಖಲೀಕರಣಗೊಳಿಸಬೇಕಾಗಿದ್ದು, ಈ ಮಹತ್ವದ ಕಾರ್ಯಕ್ಕೆ ಎಲ್ಲ ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸಂಶೋಧನಾ ಕೇಂದ್ರಗಳು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ಜ್ಞಾನ ಭಾರತಂ ಮಿಷನ್ ಯೋಜನೆಯ ಪ್ರಚಾರದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ವಿಂದ್ಯಾ ಎನ್.ಎಂ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ, ಪೌರಾಯುಕ್ತ ಮಹಾಂತೇಶ್ ಹಂಗರಗಿ, ವಾರ್ತಾಧಿಕಾರಿ ಮಂಜುನಾಥ್ ಬಿ., ಜ್ಞಾನ ಭಾರತಂ ಜಿಲ್ಲಾ ಮಟ್ಟದ ಸಂಯೋಜಕ ಗೋಪಾಲಚಾರ್, ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಧನಲಕ್ಷ್ಮಿ, ಸಂಶೋಧಕ ಬಿ. ಜಗದೀಶ್ ಶೆಟ್ಟಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-28-1601434725

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.