ಉಡುಪಿ: ನಗರದ ನೂತನ ಜಿಲ್ಲಾಸ್ಪತ್ರೆ ಕಟ್ಟಡದ ಕಾಮಗಾರಿಯು 2021ರಲ್ಲಿ ಆರಂಭಗೊಂಡಿದ್ದು, ಕಾಮಗಾರಿಯು ಮೂರು ವರ್ಷಗಳ ಹಿಂದೆಯೇ ಶೇ 90ರಷ್ಟು ಪೂರ್ಣಗೊಂಡಿದ್ದರೂ ಬಾಕಿ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲು ಸರ್ಕಾರ ಇಚ್ಛಾಶಕ್ತಿ ತೋರುತ್ತಿಲ್ಲ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆರೋಪಿಸಿದರು.

ಜಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಜಿಲ್ಲಾಸ್ಪತ್ರೆಯನ್ನು ಈ ತಿಂಗಳ ಅಂತ್ಯದೊಳಗೆ ಲೋಕಾರ್ಪಣೆಗೊಳಿಸದಿದ್ದರೆ ಬಿಜೆಪಿ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಜಿಲ್ಲಾಸ್ಪತ್ರೆಯಲ್ಲಿ ಐಸಿಯು, ಹಾಸಿಗೆ ವ್ಯವಸ್ಥೆ ದೊರಕದೆ ಬಡ ರೋಗಿಗಳು ದಕ್ಷಿಣ ಕನ್ನಡ ಜಿಲ್ಲೆಯ ವೆನ್ಲಾಕ್ ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯ ಎದುರಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ ಮನವಿ ನೀಡಿ, ಪ್ರತಿಭಟನೆ ನಡೆಸಿದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ನಿಷ್ಕ್ರಿಯವಾಗಿದೆ ಎಂದು ದೂರಿದರು.

ಸಾಮಾಜಿಕ ಭದ್ರತಾ ಯೋಜನೆಗಳಡಿ ನೀಡಲಾಗುತ್ತಿರುವ ಮಾಸಾಶನಕ್ಕೆ ಕುಟುಂಬದ ವಾರ್ಷಿಕ ಆದಾಯ ಮಿತಿ ₹32 ಸಾವಿರ ಎಂದು ನಿಗದಿಪಡಿಸಿರುವುದು ಅವೈಜ್ಞಾನಿಕ ಹಾಗೂ ಬಡವರ ವಿರೋಧಿ ನಿರ್ಧಾರವಾಗಿದೆ. ಇದರಿಂದ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಲಕ್ಷಾಂತರ ಅರ್ಹ ಫಲಾನುಭವಿಗಳು ಯೋಜನೆಯ ಲಾಭದಿಂದ ವಂಚಿತರಾಗುತ್ತಿದ್ದಾರೆ ಎಂದರು.

ಮಾಸಾಶನಕ್ಕೆ ನಿಗದಿಪಡಿಸಿರುವ ಕುಟುಂಬದ ವಾರ್ಷಿಕ ಆದಾಯ ಮಿತಿಯನ್ನು ₹32 ಸಾವಿರದಿಂದ ₹1.20 ಲಕ್ಷಕ್ಕೆ ಹೆಚ್ಚಿಸಬೇಕು ಇಲ್ಲದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದರು.

ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ, ಜಿಲ್ಲಾ ವಕ್ತಾರ ಪಿ.ದಿವಾಕರ ಶೆಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-28-560852587

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.