ಸೋಮವಾರ, ಮಾರ್ಚ್ 20, 2023
24 °C

ಉಡುಪಿ: ವೈದ್ಯ ಡಾ.ಶ್ರೀಧರ ಹೊಳ್ಳ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಉಡುಪಿಯ ಮಿತ್ರ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಶ್ರೀಧರ ಹೊಳ್ಳ (67) ಗುರುವಾರ ನಿಧನರಾದರು.

ಮೃತರಿಗೆ ಪತ್ನಿ, ಮೂವರು ಪುತ್ರಿಯರು ಇದ್ದಾರೆ. ಮಿದುಳಿನ ಕಾಯಿಲೆಯಿಂದ ಬಳಲುತ್ತಿದ್ದ ಡಾ.ಶ್ರೀಧರ ಹೊಳ್ಳ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

ರೋಗಿಗಳಿಗೆ ನಗುಮೊಗದಿಂದ ಚಿಕಿತ್ಸೆ ನೀಡುತ್ತಿದ್ದ ಡಾ.ಶ್ರೀಧರ ಹೊಳ್ಳ ನಿಧನಕ್ಕೆ ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು