ಪಡುಬಿದ್ರಿ: ‘ಇತ್ತೀಚಿನ ಸಮೀಕ್ಷೆಯೊಂದರ ಪ್ರಕಾರ ಮಾದಕ ವ್ಯಸನದಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿ 3ನೇ ಸ್ಥಾನದಲ್ಲಿದೆ. ಇದು ಬೇಸರದ ಸಂಗತಿ. ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಮಕ್ಕಳು ವ್ಯಸನದಿಂದ ದೂರವಾಗಬೇಕು’ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕರೆ ನೀಡಿದರು.

ಪಲಿಮಾರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ವಿದ್ಯಾರ್ಥಿಗಳ ಅಭಿನಂದನೆ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಡಿಗ್ರಿ ಕೊಡುವಲ್ಲಿ ನಾವು ಸಾರ್ಥಕತೆ ಪಡೆಯುತ್ತಿದ್ದೇವೆ. ಆದರೆ ಸಂಸ್ಕಾರ ಕೊಡುವಲ್ಲಿ ಎಡವುತ್ತಿದ್ದೇವೆ. ವಿದ್ಯಾರ್ಥಿಗಳು ಯಾವತ್ತು ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದರು.

ದ್ವಿತೀಯ ಪಿಯುಸಿಯಲ್ಲಿ ಸತತ ಮೂರನೇ ಬಾರಿ ಶೇ 100 ಫಲಿತಾಂತ ದಾಖಲಿಸಲು ಕಾರಣರಾದ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಪಾಲಕರನ್ನು ಅಭಿನಂದಿಸಲಾಯಿತು. ವಿಷಯವಾರು ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಕಾಲೇಜಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಡಾ.ಪ್ರಭಾ ನಂಬಿಯಾರ್ ಅವರು ದತ್ತಿನಿಧಿ ವಿದ್ಯಾರ್ಥಿ ವೇತನ ವಿತರಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಸಾದ್ ಪಲಿಮಾರು, ಗ್ರಾಪಂ ಮಾಜಿ ಅಧ್ಯಕ್ಷರಾದ ಗಾಯತ್ರಿ ಡಿ.ಪ್ರಭು, ಸೌಮ್ಯಲತಾ ಶೆಟ್ಟಿ, ಮಾಜಿ ಉಪಾಧ್ಯಕ್ಷ ರಾಯೇಶ್ವರ್ ಪೈ, ಮಾಜಿ ಸದಸ್ಯರಾದ ಸುಜಾತ, ಪ್ರವೀಣ್ ಕುಮಾರ್, ಗುತ್ತಿಗೆದಾರ ಮನೀಶ್, ಪ್ರೌಢಶಾಲೆ ಹಿರಿಯ ಸಹಶಿಕ್ಷಕ ಮಾಧವ ಸಾಲಿಯಾನ್ ಉಪಸ್ಥಿತರಿದ್ದರು.

ಪ್ರಾಂಶುಪಾಲೆ ಗ್ರೆಟ್ಟಾ ಮೊರಾಸ್ ಸ್ವಾಗತಿಸಿದರು. ಶುಭಲಕ್ಷ್ಮಿ ಆರ್.ನಾಯಕ್ ವಿದ್ಯಾರ್ಥಿಗಳ ಪಟ್ಟಿ ಓದಿದರು. ಸ್ವಾತಿ ನಿರೂಪಿಸಿದರು. ಚೈತ್ರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-28-468954587

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.