ಉಡುಪಿ: ‘ಗುರು ಹಿರಿಯರನ್ನು ಗೌರವಿಸಿ, ದೇವರಲ್ಲಿ ಶ್ರದ್ಧೆ, ನಂಬಿಕೆ ಇರಲಿ. ತಮ್ಮ ತಮ್ಮ ಕೆಲಸಗಳಲ್ಲಿ ಭಗವಂತನನ್ನು ಕಾಣಲು ಪ್ರಯತ್ನಿಸಿ’ ಎಂದು ಉಡುಪಿ ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಈಶಪ್ರಿಯತೀರ್ಥ ಶ್ರೀಪಾದರು ಹೇಳಿದರು.

ಉಡುಪಿ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ಪ್ರಾರಂಭೋತ್ಸವದಲ್ಲಿ ಅವರು ಮಾತನಾಡಿದರು.

ಡಯೆಟ್ ಪ್ರಾಂಶುಪಾಲ ಅಶೋಕ್ ಕಾಮತ್ ಮಾತನಾಡಿ, ‘ವಿದ್ಯಾರ್ಥಿಗಳು ಲಭ್ಯವಿರುವ ಸಮಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿಕೊಂಡು ತಮ್ಮಲ್ಲಿರುವ ಸಾಮರ್ಥ್ಯವನ್ನು ಅರ್ಥ ಮಾಡಿಕೊಂಡು ಬಹುಮುಖ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು’ ಎಂದು ಹೇಳಿದರು.

ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಗೌರವ ಪ್ರಧಾನ ಕಾರ್ಯದರ್ಶಿ ಎ.ಪಿ.ಭಟ್, ರಮೇಶ್ ಹಂದೆ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಸಿ.ಸುರೇಶ್ ತುಂಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಶ್ರೀದೇವಿ ಬಾಳಿಗ ಅವರು ಶೈಕ್ಷಣಿಕ ಶಿಸ್ತಿನ ಕುರಿತು ಮಾಹಿತಿ ನೀಡಿದರು. ಪ್ರತಿಮಾ ಬಾಳಿಗ ಕಾರ್ಯಕ್ರಮ ನಿರೂಪಿಸಿದರು. ದೀಪಿಕಾ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-28-636485012

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.