ಉಡುಪಿ: ಯಾರಿಗೂ ಯಾವುದೇ ಕ್ಷೇತ್ರದಲ್ಲಿ ಪರಿಪೂರ್ಣ ಪಕ್ವತೆ ಇರುವುದಿಲ್ಲ. ವೃತ್ತಿ ಹಾಗೂ ವೈಯಕ್ತಿಕ ಜೀವನ ಎರಡರಲ್ಲಿಯೂ ಅನುಭವವೇ ಮನುಷ್ಯನನ್ನು ಮುನ್ನಡೆಸುತ್ತದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಹೇಳಿದರು.

ಉಡುಪಿ ವಕೀಲರ ಸಂಘಕ್ಕೆ ಶನಿವಾರ ಭೇಟಿ ನೀಡಿ ಮಾತನಾಡಿದ ಅವರು, ನಮಗೆ ಗೊತ್ತಿಲ್ಲದ ವಿಷಯದ ಕುರಿತಾಗಿ ಇನ್ನೊಬ್ಬರನ್ನು ಕೇಳುವುದು ತಪ್ಪಲ್ಲ. ತಪ್ಪು ಮಾಡುವ ಬದಲು ಹಿರಿಯರನ್ನು ಕೇಳುವುದು ಉತ್ತಮ ಎಂದರು.

ಉತ್ತಮ ತೀರ್ಪು ಸಮಾಜಕ್ಕೆ ಅಗತ್ಯ. ನ್ಯಾಯಪೀಠ ಮತ್ತು ವಕೀಲರ ಸಂಘ ಸಂವಿಧಾನದ ತತ್ವ ಆದರ್ಶಗಳಂತೆ ನಡೆಯಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಡುಪಿ ವಕೀಲರ ಸಂಘದಿಂದ ಅವರನ್ನು ಸನ್ಮಾನಿಸಲಾಯಿತು. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣನವರ್ ಅಧ್ಯಕ್ಷತೆ ವಹಿಸಿದ್ದರು.

ಪೋಕ್ಸೊ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶ್ರೀನಿವಾಸ್ ಸುವರ್ಣ, ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಎ. ಸಮೀವುಲ್ಲಾ ಇದ್ದರು.

ರೂಪಶ್ರೀ ಪ್ರಾರ್ಥಿಸಿದರು. ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿದರು. ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ ನ್ಯಾಯಮೂರ್ತಿಯವರ ಕಿರು ಪರಿಚಯ ಮಾಡಿದರು. ಕಾರ್ಯದರ್ಶಿ ರಾಜೇಶ್ ಎ.ಆರ್ ವಂದಿಸಿದರು. ಲೋಕಾಯುಕ್ತ ವಿಶೇಷ ಅಭಿಯೋಜಕ ಟಿ.ವಿಜಯ್ ಕುಮಾರ್ ಶೆಟ್ಟಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.