ಉಡುಪಿ: ಹಬ್ಬಗಳು ಮಾನವರನ್ನು ಒಗ್ಗೂಡಿಸುವ ಮಾಧ್ಯಮಗಳಾಗಿದ್ದು, ಒಟ್ಟಾಗಿ ಆಚರಿಸಿದಾಗ ಪರಸ್ಪರ ಸೌಹಾರ್ದ ಸಾರುತ್ತವೆ ಎಂದು ತೊಟ್ಟಂ ಸಂತ ಅನ್ನಮ್ಮ ಚರ್ಚ್ನ ಧರ್ಮಗುರು ಡೆನಿಸ್ ಡೇಸಾ ಹೇಳಿದರು.ಜಮಾತೆ ಇಸ್ಲಾಮಿ ಹಿಂದ್ ಮಲ್ಪೆ ಶಾಖೆಯ ವತಿಯಿಂದ ಮಲ್ಪೆ ಚಿಲ್ಲಿಸ್ ಹೋಟೆಲ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಈದ್ ಸೌಹಾರ್ದ ಕೂಟದಲ್ಲಿ ಅವರು ಮಾತನಾಡಿದರು.

ರಂಜಾನ್ ಹಬ್ಬದ ಸಂದರ್ಭದಲ್ಲಿ ಪ್ರಾರ್ಥನೆ, ಉಪವಾಸ, ದಾನಧರ್ಮ ಪ್ರಮುಖವಾಗಿ ಕಾಣಸಿಗುವ ವಿಷಯವಾಗಿದ್ದು, ಇತರ ಧರ್ಮಗಳಲ್ಲಿ ಕೂಡ ಇದರ ಸಾಮ್ಯತೆಯನ್ನು ಕಾಣುತ್ತೇವೆ. ಉಪವಾಸ, ಪ್ರಾರ್ಥನೆಯ ಮೂಲಕ ದೇಹದ ಶುದ್ದಿ, ಮಾನಸಿಕ ಹಾಗೂ ಆಧ್ಯಾತ್ಮಿಕ ಪರಿವರ್ತನೆಗೆ ಕಾರಣವಾಗುತ್ತದೆ. ನಮ್ಮಲ್ಲಿರುವ ನಕಾರಾತ್ಮಕ ಚಿಂತನೆಗಳನ್ನು ದೂರಗೊಳಿಸಿ ಸಕಾರತ್ಮಕ ಆಲೋಚನೆಗಳನ್ನು ಮಾಡಲು ಹಬ್ಬದ ಸಮಯದಲ್ಲಿ ಸೂಕ್ತ ಅವಕಾಶವಾಗಿದೆ ಎಂದರು.

ಮಣಿಪಾಲ ಎಂಐಟಿಯ ಅಸೋಸಿಯೇಟ್ ಪ್ರೊಫೆಸರ್ ಜಮಾಲುದ್ದೀನ್ ಮಾತನಾಡಿ, ಈದ್ ಸಾರ್ವತ್ರಿಕ ಹಬ್ಬವಾಗಿದ್ದು, ಹಬ್ಬದ ಸಂದರ್ಭದಲ್ಲಿ ನಮ್ಮ ನೆರೆಹೊರೆಯವರು ಕೂಡ ಹಸಿವಿನಿಂದ ಇರಬಾರದು ಎಂಬ ಸ್ಪಷ್ಟ ಸಂದೇಶವಿದೆ. ನಮ್ಮ ಆಚರಣೆಗಳು ಇತರರೊಂದಿಗೆ ಹಂಚಿಕೊಂಡಾಗ ಸಮಾಜದಲ್ಲಿ ಸೌಹಾರ್ದ ಮೂಡಲು ಸಾಧ್ಯವಿದೆ ಎಂದು ಹೇಳಿದರು.

ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿ ಅಧ್ಯಕ್ಷ ರಮೇಶ್ ತಿಂಗಳಾಯ, ಮಲ್ಪೆ ಸಿಎಸ್ಐ ಚರ್ಚಿನ ಧರ್ಮಗುರು ವಿನಯ್ ಸಂದೇಶ್ ಮಾತನಾಡಿದರು.

ಜಮಾತೆ ಇಸ್ಲಾಮಿ ಹಿಂದ್ ಸಂಚಾಲಕ ಅಬ್ದುಲ್ ಅಝೀಜ್, ಸ್ಥಾನೀಯ ಸಂಚಾಲಕ ಅಬ್ದುಲ್ ರೆಹಮಾನ್ ಉಪಸ್ಥಿತರಿದ್ದರು.ಸಫ್ವಾನ್ ಪ್ರಾರ್ಥನೆ ನೆರವೇರಿಸಿದರು, ಶಬೀರ್ ಮಲ್ಪೆ ವಂದಿಸಿದರು. ಶೊಯೆಬ್ ಅಹ್ಮದ್ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-28-829706828

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.