ಉಡುಪಿ: ಜಿಲ್ಲೆಯ ಅಗ್ನಿಶಾಮಕ ದಳವನ್ನು ಬಲವರ್ಧನೆ ಮಾಡಿ, ಹೆಚ್ಚುವರಿ ವಾಹನ ಹಾಗೂ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡುವಂತೆ ಆಗ್ರಹಿಸಿ ಬಿಜೆಪಿ ಯುವಮೋರ್ಚಾ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಅಗ್ನಿಶಾಮಕ ದಳಕ್ಕೆ ಹೆಚ್ಚುವರಿ ವಾಹನ ಒದಗಿಸಬೇಕು ಹಾಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಹೇಳಲಾಗಿದೆ.

ಮಣಿಪಾಲ ಹಾಗೂ ಬ್ರಹ್ಮಾವರ ಭಾಗಕ್ಕೆ ಅಗ್ನಿಶಾಮಕ ದಳದ ಘಟಕದ ಬೇಡಿಕೆಗೆ ಇದೀಗ ಮಂಜೂರಾತಿ ನೀಡಿದ್ದರೂ, ಬ್ರಹ್ಮಾವರ ಅಗ್ನಿಶಾಮಕ ದಳದ ಘಟಕಕ್ಕೆ ಇನ್ನೂಅನುದಾನ ಮಂಜೂರಾಗಿಲ್ಲ ಎಂದು ತಿಳಿಸಿದ್ದಾರೆ.

ಮೀನುಗಾರಿಕೆ, ಆರೋಗ್ಯ, ಶಿಕ್ಷಣ, ಬ್ಯಾಂಕಿಂಗ್, ಕೈಗಾರಿಕಾ ಕ್ಷೇತ್ರದಲ್ಲಿ ದಿನೇ ದಿನೇ ಬೆಳೆಯುತ್ತಿರುವ ಉಡುಪಿ ಜಿಲ್ಲೆಗೆ ಅತ್ಯಾಧುನಿಕ ಸೌಲಭ್ಯ ಹೊಂದಿರುವ ಅಗ್ನಿಶಾಮಕ ದಳ ಅತ್ಯಂತ ಅಗತ್ಯವಾಗಿದ್ದು, ಸರ್ಕಾರ ಇಂತಹ ಅತ್ಯಗತ್ಯ ತುರ್ತು ಸೇವೆಗಳ ಬಗ್ಗೆ ವಿಶೇಷ ಆದ್ಯತೆ ನೀಡಬೇಕು ಎಂದು ಮನವಿಯಲ್ಲಿ ಹೇಳಲಾಗಿದೆ.

ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳಾದ ಪ್ರದೀಪ್ ಕುಂದರ್, ಸುಶಾಂತ್ ಪೂಜಾರಿ, ಮಿಥುನ್ ಅಮೀನ್, ಸಚಿನ್ ಪೂಜಾರಿ, ಗಣೇಶ್ ಸೂರಲು, ಭರತ್ ಪೂಜಾರಿ, ಅವಿನಾಶ್, ನಿತಿನ್ ಪೈ , ನಿಖಿಲ್ ಮಡಿವಾಳ್, ಭೂಷಣ್ ಕುಮಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-28-1418965453

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.