ಉಡುಪಿ: ಸರ್ಕಾರಿ ಕಾಲೇಜುಗಳ ಅಭಿವೃದ್ಧಿಯಲ್ಲಿ ಹಳೆ ವಿದ್ಯಾರ್ಥಿಗಳ ಪಾತ್ರ ಹಿರಿದು ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.

ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಹಳೆ ವಿದ್ಯಾರ್ಥಿ ಸಂಘದ ಸ್ನೇಹ ಸಮ್ಮಿಲನ ಕಾರ್ಯಕ್ರಮ ‘ಬೆಸುಗೆ-2026’ ಅನ್ನು ಈಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.

ಎಸ್ಕೆಪಿ ಗ್ರೂಪ್ನ ವ್ಯವಸ್ಥಾಪಕ ನಿರ್ದೇಶಕ ಸಂಪತ್ ಕುಮಾರ್ ಶೆಟ್ಟಿ ಮಾತನಾಡಿ, ಕನಸು ಕಾಣಬೇಕು. ಕಂಡ ಕನಸನ್ನು ಪರಿಶ್ರಮದ ಮೂಲಕ ನನಸು ಮಾಡಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ ಎಂದು ತಿಳಿಸಿದರು.

ಕಾಮಿಡಿ ಕಿಲಾಡಿ ಖ್ಯಾತಿಯ ದೀಕ್ಷಾ ಬ್ರಹ್ಮಾವರ ಮಾತನಾಡಿದರು. ಸುಚಿತ್ರಾ ಟಿ., ಶಮಂತ್ ಕುಮಾರ್ ಕೆ.ಎಸ್. ಅತಿಥಿಗಳಾಗಿದ್ದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ಗಾಂವ್ಕರ್ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶಾಲಿನಿ ಯು.ಬಿ., ಕಾರ್ಯದರ್ಶಿ ಮುನಾವರ್ ಕೆ., ಕೋಶಾಧಿಕಾರಿ ನೈನಾ ಜೆ.ಶೆಟ್ಟಿ, ಸಂಚಾಲಕ ಸುಷ್ಮಾ ಟಿ., ಗಣೇಶ್ ಪ್ರಸಾದ್ ನಾಯಕ್, ಸಂತೋಷ್ ಸುವರ್ಣ ಉಪಸ್ಥಿತರಿದ್ದರು.

ಹಳೆ ವಿದ್ಯಾರ್ಥಿ ಸಂಘದ ಸಂಚಾಲಕ ರೋಷನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು.

ಶಮಿತಾ ಮತ್ತು ಸುಹಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಲೀಲಾವತಿ ವಂದಿಸಿದರು. ನಂತರ ಕಲಾ ಚಿಗುರು ತಂಡದಿಂದ ಹಾಸ್ಯ ಕಾರ್ಯಕ್ರಮ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-28-885251984

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.