ಉಡುಪಿ: ಸರ್ಕಾರಿ ಪರವಾನಗಿ ಹೊಂದಿರುವ ಭೂಮಾಪಕರ ಸೇವೆಗೆ ಸಮಾನ ವೇತನ ನೀಡಬೇಕು ಹಾಗೂ ಹುದ್ದೆ ಕಾಯಂಗೊಳಿಸಬೇಕು ಎಂದು ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂ ಮಾಪಕರ ಸಂಘದ ಉಡುಪಿ ಘಟಕ ಒತ್ತಾಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಹಸನ್, ಸರ್ಕಾರವು ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮುಂದುವರಿಸಲಿದ್ದೇವೆ ಎಂದರು. ಜಿಲ್ಲೆಯಲ್ಲಿ ಸುಮಾರು 20 ಸರ್ಕಾರಿ ಭೂ ಮಾಪಕರು ಹಾಗೂ 118 ಮಂದಿ ಸರ್ಕಾರಿ ಪರವಾನಗಿ ಪಡೆದು ಭೂಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರಿ ಭೂಮಾಪಕರಿಗೆ ಮಾಸಿಕ ಸುಮಾರು ₹60 ಸಾವಿರದಷ್ಟು ವೇತನದ ಜತೆಗೆ ಎಲ್ಲ ರೀತಿಯ ಸೌಲಭ್ಯವನ್ನು ಒದಗಿಸಲಾಗುತ್ತದೆ. ಆದರೆ ಪರವಾನಗಿ ಹೊಂದಿದ ಭೂಮಾಪಕರಿಗೆ ತಿಂಗಳಿಗೆ ₹15 ಸಾವಿರದಿಂದ ₹20 ಸಾವಿರ ಮಾತ್ರ ವೇತನ ನೀಡಲಾಗುತ್ತಿದೆ. ಬೇರೆ ಯಾವುದೇ ಸೌಲಭ್ಯವಿಲ್ಲ ಎಂದರು.

ಮುಷ್ಕರ ನಡೆಸಿದ್ದಕ್ಕೆ ಉಡುಪಿಯಲ್ಲಿ 15 ಮಂದಿ ಪರವಾನಗಿ ಹೊಂದಿದ ಭೂ ಮಾಪಕರನ್ನು ಅಮಾನತು ಮಾಡಲಾಗಿದೆ. ಕಳೆದ 23 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದೇವೆ. ನಮ್ಮ ಸೇವೆ ವ್ಯತ್ಯಯದಿಂದ ರಾಜ್ಯದಲ್ಲಿ ಸುಮಾರು 5.79 ಲಕ್ಷ ಹಾಗೂ ಜಿಲ್ಲೆಯಲ್ಲಿ 16 ಸಾವಿರ ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ ಎಂದು ವಿವರಿಸಿದರು.

ಉಪಾಧ್ಯಕ್ಷ ಶಶಿಕುಮಾರ್, ಸಂಘದ ಪ್ರಧಾನ ಕಾರ್ಯದರ್ಶಿ ಹಸಿತ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ನಾಗೇಶ್, ಮಾಧ್ಯಮ ಪ್ರಮುಖ್ ಮೋಹನ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-28-1120221569

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.