ಉಡುಪಿ: ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲೆಯ ಏಳು ತಾಲ್ಲೂಕುಗಳ 155 ಗ್ರಾಮ ಪಂಚಾಯತಿಗಳಿಂದ ಆಯ್ಕೆಯಾಗುವ 2,413 ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ.

ಚುನಾಯಿತ ಸದಸ್ಯರ ಸಂಖ್ಯೆಗೆ ಸಂಬಂಧಿಸಿದಂತೆ ಇದೇ 24 ರೊಳಗಾಗಿ ಸಲ್ಲಿಸಲ್ಪಟ್ಟ ಆಕ್ಷೇಪಣೆ/ ಅಹವಾಲುಗಳ ಪರಿಶೀಲನಾ ಅದಾಲತ್ ಅನ್ನು ಏ. 27 ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗೇಟ್ ನಂ. 2, 2 ನೇ ಮಹಡಿ, ಕೊಠಡಿ ಸಂಖ್ಯೆ: 229, 230, ಬಹುಮಹಡಿಗಳ ಕಟ್ಟಡ, ಬೆಂಗಳೂರು ಇಲ್ಲಿ ನಡೆಸಲಾಗುವುದು.

ಆಕ್ಷೇಪಣೆ ಮತ್ತು ಅಹವಾಲುಗಳನ್ನು ಸಲ್ಲಿಸಿರುವವರು ಅದಾಲತ್ನಲ್ಲಿ ಭಾಗವಹಿಸಲು ಇಚ್ಛಿಸಿದ್ದಲ್ಲಿ ಸರ್ಕಾರದಿಂದ ನೀಡಿರುವ ಭಾವಚಿತ್ರವುಳ್ಳ ಗುರುತಿನ ಚೀಟಿಯ ಮೂಲ ಪ್ರತಿಯೊಂದಿಗೆ ಹಾಜರಾಗುವಂತೆ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-28-1018316796

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.