ಉಡುಪಿ: ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ ಸ್ಥಾನಗಳನ್ನು ಪ್ರಕರಣ 5(1) ರಂತೆ ನಿಗದಿಪಡಿಸಿದ ಕರಡು ಪ್ರಕಟಣೆಗೆ ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2 ರ ಸಂಜೆ 5.30ರವರೆಗೆ ವಿಸ್ತರಿಸಲಾಗಿದೆ.

ರಾಜ್ಯದ 31 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆಯ ಕುರಿತಂತೆ ಸ್ವೀಕರಿಸಿದ ಆಕ್ಷೇಪಣೆ/ಅಹವಾಲುಗಳ ಬಗ್ಗೆ ಏ 27 ರಂದು ನಿಗದಿಪಡಿಸಿದ್ದ ಪರಿಶೀಲನಾ ಅದಾಲತ್ನ ದಿನಾಂಕವನ್ನು ಮುಂದೂಡಿದ್ದು, ಹೊಸ ವೇಳಾಪಟ್ಟಿಯಂತೆ ಮೇ 5 ರಂದು ಮಂಗಳವಾರ ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗೇಟ್ ನಂ-2, 2 ನೇ ಮಹಡಿ ಇಲ್ಲಿ ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆವರೆಗೆ ಅದಾಲತ್ ನಡೆಯಲಿದೆ. ಆಕ್ಷೇಪಣೆ ಸಲ್ಲಿಸಿದವರು ತಮ್ಮ ಆಧಾರ್ ಅಥವಾ ಗುರುತಿನ ಚೀಟಿ ಅಥವಾ ಸರ್ಕಾರದಿಂದ ನೀಡಲಾಗಿರುವ ಭಾವಚಿತ್ರವುಳ್ಳ ಯಾವುದೇ ಗುರುತಿನ ಚೀಟಿ ಸಲ್ಲಿಸಿ ಭಾಗವಹಿಸಬಹುದು ಎಂದು ಕರ್ನಾಟಕ ಪಂಚಾಯತ್ ಸೀಮಾ ನಿರ್ಣಯ ಆಯೋಗದ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-28-162056660

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.