ಪರ್ಕಳದಲ್ಲಿ ರಾಷ್ಟ್ರೀಯ ಹೆದ್ದಾರಿಯ ದುರವಸ್ಥೆ –ಪ್ರಜಾವಾಣಿ ಚಿತ್ರ: ಉಮೇಶ್ ಮಾರ್ಪಳ್ಳಿ
ದಡಮುಟ್ಟದ ಸಂತೆಕಟ್ಟೆ ಅಂಡರ್‌ಪಾಸ್ ಕಾಮಗಾರಿ
ಅಂಬಲಪಾಡಿಯ ಹೊಂಡಮಯ ಸರ್ವಿಸ್ ರಸ್ತೆ

ಅಂಬಲಪಾಡಿಯ ಸರ್ವಿಸ್ ರಸ್ತೆಗಳು ತೀರಾ ಹದಗೆಟ್ಟಿದ್ದು ದ್ವಿಚಕ್ರ ವಾಹನ ಸವಾರರ ಪ್ರಾಣಕ್ಕೆ ಕುತ್ತು ತರುತ್ತಿವೆ. ಈ ರಸ್ತೆಗಳನ್ನು ತುರ್ತಾಗಿ ದುರಸ್ತಿಗೊಳಿಸಲು ಸಂಬಂಧಪಟ್ಟವರು ಮುಂದಾಗಬೇಕು.
ಶ್ರೀಕಾಂತ್ ಅಂಬಲಪಾಡಿ‘22 ಹೆಚ್ಚುವರಿ ಸ್ಥಳ ಗುರುತು’
ಜಿಲ್ಲೆಯಾದ್ಯಂತ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚು ಅಪಘಾತಗಳು ಸಂಭವಿಸುವ 22 ಬ್ಲ್ಯಾಕ್ ಸ್ಪಾಟ್‌ಗಳಿವೆ. ಇದಲ್ಲದೆ ಹೆಚ್ಚು ಅಪಘಾತಗಳು ಸಂಭವಿಸುವ 22 ಹೆಚ್ಚುವರಿ ಸ್ಥಳಗಳನ್ನು ಪೊಲೀಸ್ ಇಲಾಖೆ ಗುರುತಿಸಿ ಅಲ್ಲಿ ಅಪಘಾತ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು. 22 ಹೆಚ್ಚುವರಿ ಸ್ಥಳಗಳಿಗೆ ಪೊಲೀಸ್ ಇನ್‌ಸ್ಪೆಕ್ಟರ್‌ಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಈಗಾಗಲೇ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದೂ ಅವರು ತಿಳಿಸಿದರು.
‘ಮಳೆಯಿಂದಾಗಿ ಕಾಮಗಾರಿಗೆ ಅಡ್ಡಿ’
ಜಿಲ್ಲೆಯ ಬಹುತೇಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಮಳೆಯಿಂದಾಗಿ ಅಡ್ಡಿಯಾಗಿದೆ. ಪರ್ಕಳದಲ್ಲಿ ಹದಗೆಟ್ಟಿರುವ ರಸ್ತೆಯ ಹೊಂಡಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಸೂಚಿಸಲಾಗಿದೆ. ಮಳೆ ನಿಂತ ಬಳಿಕ ಈ ಸ್ಥಳದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಮಳೆಯಿಂದಾಗಿ ಮಣ್ಣಿನಲ್ಲಿ ತೇವಾಂಶ ಅಧಿಕವಾದ ಕಾರಣ ಸಂತೆಕಟ್ಟೆಯಲ್ಲಿ ಅಂಡರ್‌ಪಾಸ್ ಕಾಮಗಾರಿ ತಾತ್ಕಾಲಿಕವಾಗಿ ಸ್ಥಗಿತವಾಗಿದೆ. ಇಂದ್ರಾಳಿಯಲ್ಲಿ ಸಂಪರ್ಕ ರಸ್ತೆಯ ಕಾಂಕ್ರಿಟ್ ಕಾಮಗಾರಿ ಮುಗಿದಿದೆ. ಈ ತಿಂಗಳ ಅಂತ್ಯದೊಳಗೆ ರೈಲ್ವೆ ಮೇಲ್ಸೇತುವೆ ವಾಹನ ಸವಾರರಿಗೆ ಮುಕ್ತವಾಗಲಿದೆ ಎಂದೂ ಅವರು ಹೇಳಿದರು.