ಉಡುಪಿ: ‘ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯುವ ಮೂಲಕ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಇಸ್ಲಾಮೀಕರಣಗೊಳಿಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರ್ಕಾರ ಮುಂದಾಗಿದೆ’ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ.

‘ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಜಾತಿ, ಮತ, ಬಡವ, ಶ್ರೀಮಂತ ಎಂಬ ತಾರತಮ್ಯ ಹೋಗಲಾಡಿಸುವ ಶಾಲಾ ಸಮವಸ್ತ್ರದ ಆಶಯಕ್ಕೆ ವಿರುದ್ಧವಾಗಿ ಇದೀಗ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವ ಮೂಲಕ ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಗೊಂದಲ ಸೃಷ್ಟಿಸಲು ಸರ್ಕಾರ ಮುಂದಾಗಿದೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘2021 ಡಿಸೆಂಬರ್ ತಿಂಗಳಿನಲ್ಲಿ ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ 6 ಮಂದಿ ವಿದ್ಯಾರ್ಥಿನಿಯರು ದುರುದ್ದೇಶಪೂರ್ವಕವಾಗಿ ಹಿಜಾಬ್ಗೆ ಅವಕಾಶ ನೀಡುವಂತೆ ಆಗ್ರಹಿಸಿ ವಿವಾದ ಸೃಷ್ಟಿಸಿದ್ದರಿಂದ ರಾಜ್ಯ ಹಾಗೂ ದೇಶದಾದ್ಯಂತ ಗೊಂದಲ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಕೆಲವು ಮತೀಯವಾದಿ ನಿಷೇಧಿತ ಸಂಘಟನೆಗಳು ಹಿಜಾಬ್ ವಿವಾದದ ಮೂಲಕ ಶಾಂತಿ ಸುವ್ಯವಸ್ಥೆಗೂ ಧಕ್ಕೆ ತರುವ ಪ್ರಯತ್ನ ಮಾಡಿರುವುದನ್ನು ರಾಜ್ಯದ ಜನತೆ ಇಂದೂ ಮರೆತಿಲ್ಲ’ ಎಂದಿದ್ದಾರೆ.

‘ಅಲ್ಪಸಂಖ್ಯಾಂತರ ಓಲೈಕೆಗಾಗಿ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಹಿಜಾಬ್ ಧರಿಸಲು ಅವಕಾಶ ನೀಡುವ ಸರ್ಕಾರ ಕೇಸರಿ ಶಾಲು ಧರಿಸಲು ಅವಕಾಶ ನೀಡದೆ ಮತ್ತೊಮ್ಮೆ ತನ್ನ ಹಿಂದೂ ವಿರೋಧಿ ನಿಲುವನ್ನು ಮುಂದುವರಿಸಿದೆ’ ಎಂದು ಹೇಳಿದ್ದಾರೆ.

‘ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ನ ತ್ರಿಸದಸ್ಯ ಪೀಠ ಈ ಹಿಂದೆ ತೀರ್ಪು ನೀಡಿದ್ದರೂ ಹಿಜಾಬ್ ಧರಿಸಲು ಅವಕಾಶ ನೀಡಲು ಅತಿ ಮುತುವರ್ಜಿ ವಹಿಸುತ್ತಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು. ಕೇವಲ ರಾಜಕೀಯ ಉದ್ದೇಶಕ್ಕಾಗಿ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಹದಗೆಡಿಸಿ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ’ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-28-910017

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.