ಉಡುಪಿ: ಇಲ್ಲಿನ ಹಿರೇಬೆಟ್ಟು ಗ್ರಾಮದ ಭಟ್ರಕೋಡಿ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಸಾರ್ವಜನಿಕರಿಗೆ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭ ಭಾನುವಾರ ನಡೆಯಿತು.

ಮಣಿಪಾಲದ ಮಾಹೆಯ ಸಹಕುಲಾಧಿಪತಿ ಎಚ್.ಎಸ್. ಬಲ್ಲಾಳ್ ಅವರು ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜೀರ್ಣೋದ್ಧಾರದಂತಹ ಕೆಲಸ ಪಕ್ಷಭೇದ ಮರೆತು ಊರವರನ್ನು ಒಂದೆಡೆ ಸೇರಿಸುವುದಕ್ಕೆ, ಸೌಹಾರ್ದಕ್ಕೆ ಕಾರಣವಾಗುತ್ತವೆ ಎಂದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ದೇವಾಲಯಗಳ ಜೀರ್ಣೋದ್ಧಾರ ಎಂದರೆ ದೈವ ಋಣ ಮತ್ತು ಸಮಾಜದ ಋಣ ತೀರಿಸುವುದಕ್ಕೊಂದು ಸದವಕಾಶ ಎಂದರು.

ಮುಖಂಡ ವಿನಯಕುಮಾರ್ ಸೊರಕೆ ಮಾತನಾಡಿದರು. ಮಣಿಪಾಲ ವೈಷ್ಣವಿದುರ್ಗಾ ದೇವಾಲಯದ ಅಧ್ಯಕ್ಷ ಜಯರಾಜ್ ಹೆಗ್ಡೆ, ಸೀತಾರಾಮ ಭಟ್ ಇದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಸ್ವಾಗತಿಸಿದರು. ಗೌರವಾಧ್ಯಕ್ಷ ಬೆಲ್ಪತ್ರೆ ಸಚ್ಚಿದಾನಂದ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದಿನೇಶ್ ನಾಯಕ್ ನಿರೂಪಿಸಿದರು. ಚಂದ್ರಶೇಖರ ನಾಯಕ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-28-460823848

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.