ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಯಿ, ಮಕ್ಕಳ ಆಸ್ಪತ್ರೆ ಸಿಬ್ಬಂದಿ ಬಾಕಿ ವೇತನ ಪಾವತಿಗೆ ಸಿಎಂ ಸೂಚನೆ

Last Updated 30 ಜೂನ್ 2022, 1:50 IST
ಅಕ್ಷರ ಗಾತ್ರ

ಉಡುಪಿ: ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಬಾಕಿ ವೇತನ ಪಾವತಿ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದಾರೆ ಎಂದು ಶಾಸಕ ರಘುಪತಿ ಭಟ್‌ ತಿಳಿಸಿದ್ದಾರೆ.

ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಹಿಂದೆ ಬಿ.ಆರ್. ಶೆಟ್ಟಿ ಹೆಲ್ತ್ ಅಂಡ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಸಂಸ್ಥೆ ನಿರ್ವಹಣೆ ಮಾಡುತ್ತಿತ್ತು. ಈ ಸಂದರ್ಭ ಆಸ್ಪತ್ರೆಯ ಸಿಬ್ಬಂದಿಗೆ ಸರಿಯಾಗಿ ವೇತನ ಪಾವತಿಸಿರಲಿಲ್ಲ. ಆಸ್ಪತ್ರೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡದ ಕಾರಣ ಸರ್ಕಾರ ಆಸ್ಪತ್ರೆಯನ್ನು ವಶಕ್ಕೆ ಪಡೆದಿತ್ತು.

ಉಡುಪಿ ಹೆಚ್ಚುವರಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಪರಿಶೀಲನಾ ಸಮಿತಿ ರಚನೆ ಮಾಡಿ ಆಸ್ಪತ್ರೆಗೆ ಅವಶ್ಯಕತೆ ಇರುವ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನೇಮಿಸುವುದು ಹಾಗೂ ಸಿಬ್ಬಂದಿ ಬಾಕಿ ವೇತನ ಪಾವತಿಯ ಬಗ್ಗೆ ವರದಿ ತಯಾರಿಸಿ ಮುಖ್ಯಮಂತ್ರಿಯನ್ನು ಭೇಟಿಮಾಡಿ ಚರ್ಚಿಸಿ ಬಾಕಿ ವೇತನ ಬಿಡುಗಡೆಗೆ ಮನವಿ ಮಾಡಲಾಗಿತ್ತು.

ಅದರಂತೆ ಬಾಕಿ ವೇತನ ಪಾವತಿಗೆ ಸೂಚನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT