ಉಡುಪಿ: ನಗರದ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯರ ತಂಡವು ಶಸ್ತ್ರಚಿಕಿತ್ಸೆಯ ಮೂಲಕ ಮಹಿಳೆಯೊಬ್ಬರ ಗರ್ಭಕೋಶದಿಂದ 8 ಕೆ.ಜಿ.ತೂಕದ ಗರ್ಭಕೋಶದ ಗಡ್ಡೆಯನ್ನು (ಫೈಬ್ರಾಯ್ಡ್ ಯೂಟರಸ್) ಯಶಸ್ವಿಯಾಗಿ ಹೊರತೆಗೆಗೆದಿದೆ.

ಆಸ್ಪತ್ರೆಯ ಸ್ತ್ರೀರೋಗ ತಜ್ಞರಾದ ಡಾ.ಶಶಾಂಕ್ ಕಿಣಿ, ಡಾ.ಜಾಸ್ಮಿನ್, ಡಾ.ಕವಿತಾ, ಡಾ.ಅಮೃತಾಂಶ್ ತಂಡ ಮತ್ತು ಅರವಳಿಕೆ ತಜ್ಞರಾದ ಡಾ.ಸೂರ್ಯನಾರಾಯಣ, ಡಾ.ರಾಜ್ಗೋಪಾಲ್ ಭಂಡಾರಿ ಹಾಗೂ ಶುಶ್ರೂಷಕಾಧಿಕಾರಿ ರಕ್ಷಿತಾ, ಸಹಾಯಕಿ ಸಂಗೀತ ನೇತೃತ್ವದಲ್ಲಿ ಈ ಶಸ್ತ್ರಚಿಕಿತ್ಸೆ ನಡೆದಿದೆ.

44 ವರ್ಷದ ಮಹಿಳೆಗೆ ಒಂದು ವರ್ಷದಿಂದ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿದ್ದು, ಖಾಸಗಿ ಆಸ್ಪತ್ರೆ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು. ನೋವು ಕಡಿಮೆಯಾಗದ ಕಾರಣ ಮಹಿಳೆಯು ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಗೆ ಬಂದಿದ್ದರು. ಅಲ್ಟ್ರಾಸೌಂಡ್ ಮತ್ತು ಸಿಟಿ ಸ್ಕ್ಯಾನ್ ಪರೀಕ್ಷೆಗೆ ಒಳಪಡಿಸಿದಾಗ ಗರ್ಭಕೋಶದಲ್ಲಿ ಗಡ್ಡೆ ಇರುವುದು ಪತ್ತೆಯಾಗಿದೆ.

ಬಳಿಕ ವೈದ್ಯರ ತಂಡವು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಚ್.ಅಶೋಕ್ ಅವರಲ್ಲಿ ಚರ್ಚಿಸಿ ಅವರ ಸಲಹೆಯಂತೆ ಮೇ 25ರಂದು ಶಸ್ತ್ರಚಿಕಿತ್ಸೆ ನಡೆಸಿ, ಮಹಿಳೆಯ ಗರ್ಭಕೋಶದ ಗಡ್ಡೆಯನ್ನು ಯಶಸ್ವಿಯಾಗಿ ಹೊರತೆಗೆಯಲಾಗಿದೆ. ರೋಗಿಯು ಚೇತರಿಸಿಕೊಳ್ಳುತ್ತಿದ್ದು ಚಿಕಿತ್ಸೆಯನ್ನು ಮುಂದುವರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-28-800210597

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.