ಉಡುಪಿ: ಹವಾಮಾನ ಬದಲಾವಣೆಯ ಪರಿಣಾಮವಾಗಿ ತಾಪಮಾನವು ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಾಗಿ ಏರಿಕೆಯಾಗುತ್ತಿದ್ದು, ಬಿಸಿಗಾಳಿಯು ತೋಟಗಾರಿಕೆ ಬೆಳೆಗಳ ಬೆಳವಣಿಗೆ, ಹೂವು-ಹಣ್ಣು ಕಚ್ಚುವಿಕೆ, ಹಿಡುವಿಕೆ ಮತ್ತು ಉತ್ಪಾದನೆ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ರೈತರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

ಬೆಳಿಗ್ಗೆ 6 ಗಂಟೆಯೊಳಗೆ ಅಥವಾ ಸಂಜೆ 5 ಗಂಟೆಯ ನಂತರ ಮಾತ್ರ ನೀರಾವರಿ ಮಾಡಬೇಕು. ದಿನಕ್ಕೆ 2 ಬಾರಿ ಲಘು ನೀರಾವರಿ ಮಾಡುವುದರಿಂದ ಉತ್ತಮ ಮಣ್ಣಿನ ತೇವಾಂಶವನ್ನು ಕಾಯ್ದುಕೊಳ್ಳಲು ನಿಯಮಿತವಾಗಿ ನೀರು ನೀಡಬೇಕು. ಹನಿ ನೀರಾವರಿ ವ್ಯವಸ್ಥೆ ಇದ್ದರೆ ಹೆಚ್ಚು ಪ್ರಯೋಜನಕಾರಿಯಾಗಲಿದೆ

ಒಣ ಎಲೆಗಳು, ಹುಲ್ಲು, ತೆಂಗಿನ ತೊಗಟೆ ಮುಂತಾದವುಗಳಿಂದ ಮಲ್ಚಿಂಗ್ ಮಾಡುವುದರಿಂದ ಮಣ್ಣಿನಲ್ಲಿ ತೇವಾಂಶ ಉಳಿದುಕೊಂಡು ಬಿಸಿಲಿನ ತಾಪಮಾನ ಕಡಿಮೆಯಾಗುತ್ತದೆ.

ಸಸಿ ನರ್ಸರಿಗಳಲ್ಲಿ ಶೇಡ್ ನೆಟ್ ಬಳಕೆ ಮಾಡಬೇಕು. ಹೊಸದಾಗಿ ನೆಟ್ಟ ಸಸಿಗಳಿಗೆ ತಾತ್ಕಾಲಿಕ ನೆರಳು ಒದಗಿಸಬೇಕು. ಬೇಸಿಗೆಯಲ್ಲಿ ರಾಸಾಯನಿಕ ಗೊಬ್ಬರ ಬಳಕೆ ತಾತ್ಕಾಲಿಕವಾಗಿ ತಪ್ಪಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-28-2057109530

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.