ಉಡುಪಿ: ಕೊಲ್ಲಿ ರಾಷ್ಟ್ರಗಳಲ್ಲಿ ಯುದ್ಧ ನಡೆಯುತ್ತಿರುವುದರಿಂದ ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ಪೂರೈಕೆ ಸ್ಥಗಿತವಾಗಿರುವುದು ಜಿಲ್ಲೆಯಲ್ಲೂ ಹೋಟೆಲ್ ಉದ್ಯಮಕ್ಕೆ ಭಾರಿ ಹೊಡೆತ ನೀಡಿದೆ.

ಉಡುಪಿ ನಗರ, ಮಣಿಪಾಲ ಸೇರಿದಂತೆ ವಿವಿಧೆಡೆ ಈಗಾಗಲೇ ಹಲವು ಸಣ್ಣ ಹೋಟೆಲ್ಗಳು ಬಂದ್ ಆಗಿವೆ ಎಂದು ಹೋಟೆಲ್ ಉದ್ಯಮಿಗಳು ತಿಳಿಸಿದ್ದಾರೆ.

ಹೋಟೆಲ್ ಕಿದಿಯೂರು ಸೇರಿದಂತೆ ಕೆಲವು ಹೋಟೆಲ್ಗಳಲ್ಲಿ ಈಗಾಗಲೇ ಕಟ್ಟಿಗೆ ಒಲೆಯ ವ್ಯವಸ್ಥೆ ಮಾಡಲಾಗಿದೆ. ಆದರೂ ಹೆಚ್ಚಿನ ಹೋಟೆಲ್ಗಳ ಮೆನುವಿನಲ್ಲಿ ಬದಲಾವಣೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಕ್ಯಾಂಟೀನ್, ಫಾಸ್ಟ್ ಫುಡ್ ಅಂಗಡಿಗಳನ್ನು ನಡೆಸುವವರು ಹೆಚ್ಚಿನ ಸಮಸ್ಯೆ ಎದುರಿಸುತ್ತಿದ್ದಾರೆ. ಬಹುತೇಕ ಫಾಸ್ಟ್ಫುಡ್ ಸೆಂಟರ್ಗಳು ಬಾಗಿಲು ಮುಚ್ಚಿವೆ ಎನ್ನುತ್ತಾರೆ ಫಾಸ್ಟ್ ಫುಡ್ ಸೆಂಟರ್ ಮಾಲೀಕರು.

ವಾಣಿಜ್ಯ ಬಳಕೆಯ ಸಿಲಿಂಡರ್ ಸ್ಥಗಿತಗೊಂಡು ಹಲವು ದಿನಗಳು ಕಳೆದಿವೆ. ಸಂಬಂಧಪಟ್ಟವರು ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿಲ್ಲ. ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡಿ ಎನ್ನುತ್ತಿದ್ದಾರೆ. ಆದರೆ ನಗರದ ಹೆಚ್ಚಿನ ಹೋಟೆಲ್ಗಳಲ್ಲಿ ಕಟ್ಟಿಗೆ ಒಲೆಯ ವ್ಯವಸ್ಥೆ ಇಲ್ಲ. ಬಾಡಿಗೆ ಕಟ್ಟಡದಲ್ಲಿ ಹೋಟೆಲ್ ನಡೆಸುವವರಿಗೆ ಕಟ್ಟಿಗೆ ಒಲೆ ಹಾಕಲು ಮಾಲಕರು ಬಿಡುತ್ತಿಲ್ಲ ಎಂದೂ ಹೋಟೆಲ್ ಮಾಲಕರು ಅಳಲು ತೋಡಿಕೊಂಡಿದ್ದಾರೆ.

ಕೆಲವರು ಇಂಡಕ್ಷನ್ ಸ್ಟೌ ಬಳಸುತ್ತಿದ್ದಾರೆ. ಆದರೆ ಇದರಿಂದ ವಿದ್ಯುತ್ ಬಿಲ್ ಅಧಿಕ ಬರುವ ಸಾಧ್ಯತೆ ಇದೆ. ಇಂಡಕ್ಷನ್ ಸ್ಟೌನಲ್ಲಿ ದೊಡ್ಡ ಪ್ರಮಾಣದಲ್ಲಿ ಅಡುಗೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದೂ ಹೇಳುತ್ತಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260319-28-1872812674

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.