ಉಡುಪಿ: ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ ಎಚ್ಪಿವಿ ಲಸಿಕೆಯನ್ನು ನೀಡಲು ಜಿಲ್ಲೆಯಲ್ಲಿ ಸುಮಾರು 11,274 ಮಕ್ಕಳನ್ನು ಗುರುತಿಸಲಾಗಿದ್ದು, ಈಗಾಗಲೇ 4,150 ಲಸಿಕೆಗಳನ್ನು ಸರಬರಾಜು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಲಸಿಕೆಗಳು ಲಭ್ಯವಾಗಲಿವೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಗರದ ಬ್ರಹ್ಮಗಿರಿ ಸೇಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಚ್ಪಿವಿ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ 14 ವರ್ಷ ತುಂಬಿದ ಹಾಗೂ 15 ವರ್ಷ ವಯಸ್ಸಿನ 1.15 ಕೋಟಿ ವಿದ್ಯಾರ್ಥಿನಿಯರಿಗೆ ಲಸಿಕೆ ನೀಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಸುಮಾರು 6,89,620 ಅರ್ಹರನ್ನು ಗುರುತಿಸಲಾಗಿದೆ. ಈಗಾಗಲೇ 2,54,000 ಲಸಿಕೆಗಳನ್ನು ಆಯಾಯ ಜಿಲ್ಲಾ ಕೇಂದ್ರಕ್ಕೆ ರವಾನಿಸಲಾಗಿದೆ ಎಂದರು.

ಹ್ಯೂಮನ್ ಪ್ಯಾಪಿಲೋಮ ವೈರಸ್ ಗರ್ಭಕಂಠ ಸೇರಿದಂತೆ ಅನೇಕ ಮಾದರಿಯ ಕ್ಯಾನ್ಸರ್ ಹರಡಲು ಕಾರಣವಾಗುತ್ತದೆ. ಸಾಮಾನ್ಯವಾಗಿ ಮಹಿಳೆಯರಲ್ಲಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ ಎಚ್ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

14 ವರ್ಷ ತುಂಬಿದ ಹಾಗೂ 15 ವರ್ಷ ವಯಸ್ಸಿನೊಳಗಿನ ಹೆಣ್ಣು ಮಕ್ಕಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಜಿಲ್ಲಾಸ್ಪತ್ರೆಗಳು ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆಯನ್ನು ನೀಡಲಾಗುವುದು ಎಂದರು.

ಗರ್ಭಕಂಠ ಕ್ಯಾನ್ಸರ್ ತಡೆಗೆ ಲಸಿಕೆಯೊಂದೇ ಸಹಕಾರಿಯಾಗಿದ್ದು, ಲಸಿಕೆ ಪಡೆದ ಅರ್ಹರು ಸುರಕ್ಷಿತರಾಗಿದ್ದಾರೆ, ಇದರಿಂದ ಆರೋಗ್ಯದಲ್ಲಿ ಯಾವುದೇ ವ್ಯತ್ಯಯ ಸಂಭವಿಸುವುದಿಲ್ಲ ಹಾಗೂ ಅಡ್ಡಪರಿಣಾಮಗಳಿಲ್ಲ ಎಂಬುದರ ಬಗ್ಗೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಎಂದು ಹೇಳಿದರು.

ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ. ಮಾತನಾಡಿ, ಎಚ್.ಪಿ.ವಿ. ಲಸಿಕಾ ಕಾರ್ಯಕ್ರಮವನ್ನು ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಮಾರ್ಗಸೂಚಿ ಅನುಸಾರ ಆಯೋಜನೆ ಮಾಡಲಾಗುತ್ತಿದೆ. ಯೂ-ವಿನ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡ ಹೆಣ್ಣು ಮಕ್ಕಳಿಗೆ ಲಸಿಕೆ ನೀಡಲಾಗುವುದು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್ಲಮ್ಮ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಶೋಕ್ ಎಚ್., ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ, ಸೇಂಟ್ ಸಿಸಿಲಿ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ಸಿಸ್ಟರ್ ಪ್ರಿಯಾ ಮರಿಯಾ, ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ನಿರೂಪಿಸಿದರು. ಚಂದ್ರಕಲಾ ವಂದಿಸಿದರು.

‘ಉತ್ತಮ ಹವ್ಯಾಸ ರೂಢಿಸಿಕೊಳ್ಳಿ’ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಜಿ.ಎಸ್. ಚಂದ್ರಶೇಖರ್ ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಯೂ ಉತ್ತಮ ಹವ್ಯಾಸ ಪೌಷ್ಟಿಕ ಆಹಾರ ಸೇವನೆ ನಿಯಮಿತ ದೈಹಿಕ ಚಟುವಟಿಕೆ ದೇಹದ ತೂಕದಲ್ಲಿ ಸಮತೋಲನ ಕಾಯ್ದುಕೊಂಡಲ್ಲಿ ಆರೋಗ್ಯಯುತ ಜೀವನ ನಡೆಸಬಹುದು ಎಂದರು. ಕ್ಯಾನ್ಸರ್ ಎನ್ನುವುದು ಮಾರಣಾಂತಿಕ ಕಾಯಿಲೆಯಲ್ಲ. ಕ್ಯಾನ್ಸರ್ ಸೇರಿದಂತೆ ಯಾವುದೇ ರೋಗಗಳ ಲಕ್ಷಣಗಳು ಕಂಡುಬಂದಲ್ಲಿ ಆರಂಭಿಕ ಹಂತದಲ್ಲಿ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆದುಕೊಂಡಲ್ಲಿ ಗುಣಮುಖರಾಗಿ ಆರೋಗ್ಯವಂತ ಜೀವನ ನಡೆಸಬಹುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.