ಉಡುಪಿ: ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಹಿರಿಯಡ್ಕದ ಪಕ್ಕಾಲು ಹೆಬ್ಬಾರು ಸೇತುವೆ ಬಳಿಯಲ್ಲಿ ಬಂಧಿಸಿದ್ದಾರೆ.

ಕುರ್ಕಾಲುವಿನ ಸುಹಾಸ್ (21) ಹಾಗೂ ಕಾಪು ಭರತ್ ನಗರದ ಲವ ಶೆಟ್ಟಿ(64) ಬಂಧಿತ ಆರೋಪಿಗಳು.

ಇವರು ಕಸಾಯಿಖಾನೆಗೆ ಮಾಂಸ ಮಾಡಲು ಪೆರ್ಡೂರು ಕಡೆಯಿಂದ ಹಿರಿಯಡ್ಕ ಕಡೆಗೆ ಟೆಂಪೋ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ 4 ಜಾನುವಾರುಗಳನ್ನು ಸಾಗಿಸುತ್ತಿದ್ದು, ಪಕ್ಕಾಲು ಹೆಬ್ಬಾರು ಸೇತುವೆ ಬಳಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದಿದೆ. ಈ ವೇಳೆ ಆರೋಪಿಗಳನ್ನು ಬಂಧಿಸಿ, ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-28-1902567529

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.