ಉಡುಪಿ: ಕೊಡಗು ಜಿಲ್ಲೆಯ ಹೋಮ್ ಸ್ಟೇಯಲ್ಲಿ ವಿದೇಶಿ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು 39 ಅಕ್ರಮ ಹೋಮ್ ಸ್ಟೇಗಳನ್ನು ಪತ್ತೆ ಹಚ್ಚಿದ್ದಾರೆ.

ಡಿಜಿಪಿ ಅವರ ನಿರ್ದೇಶನದಂತೆ ವಿಶೇಷ ಕಾರ್ಯಾಚರಣೆ ನಡೆಸಲಾಗಿದ್ದು, 39 ಅಕ್ರಮ ಹೋಮ್ಸ್ಟೇ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಗೆ ವರದಿ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16, ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ 15 ಮತ್ತು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 8 ಅಕ್ರಮ ಹೋಮ್ ಸ್ಟೇಗಳು ಪತ್ತೆಯಾಗಿವೆ ಎಂದಿದ್ದಾರೆ. ಜಿಲ್ಲೆಯಲ್ಲಿ ಪರವಾನಗಿ ಹೊಂದಿರುವ 259 ಹೋಮ್ಸ್ಟೇಗಳಿವೆ ಎಂದಿದ್ದಾರೆ.

ಅಕ್ರಮ ಹೋಮ್ ಸ್ಟೇಗಳನ್ನು ಮುಚ್ಚಲು ಆದೇಶ ನೀಡಿದ್ದೇವೆ. ಸೂಕ್ತ ದಾಖಲೆಗಳನ್ನು ಹಾಜರುಪಡಿಸಿದರಷ್ಟೇ ಅವುಗಳನ್ನು ನಡೆಸಲು ಅವಕಾಶ ನೀಡಲಾಗುವುದು ಎಂದೂ ಹೇಳಿದ್ದಾರೆ.

ಹೋಮ್ಸ್ಟೇ/ರೆಸಾರ್ಟ್ಗಳು ಪರವಾನಗಿ ನಿಯಮ ಹಾಗೂ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಹಾಗೂ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸದೇ ಇರುವ ಹೋಮ್ಸ್ಟೇ/ರೆಸಾರ್ಟ್ಗಳ ಪರವಾನಗಿಯನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ಹೋಂಸ್ಟೇಗಳಿಗೆ ವಿದೇಶಿಯರು ಬಂದಾಗ ನಿಯಾಮಾನುಸಾರ ಅವರ ವಿವರಗಳನ್ನು ಒಳಗೊಂಡ ಫಾರ್ಮ್ ಸಿ ಅನ್ನು ಆನ್ಲೈನ್ ಮೂಲಕ ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಆ ಮಾಹಿತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ನೀಡಬೇಕು ಎಂದೂ ಅವರು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-28-1781066684

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.