ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವರ್ಣಾ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಕ್ರಮಕ್ಕೆ ಸಿದ್ದರಾಮಯ್ಯ ಒತ್ತಾಯ

Last Updated 18 ಮೇ 2020, 14:42 IST
ಅಕ್ಷರ ಗಾತ್ರ

ಉಡುಪಿ: ಜಿಲ್ಲೆಯ ಸ್ವರ್ಣಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ಹಾಗೂ ಮರಳು ಕಳ್ಳ ಸಾಗಣೆಯಲ್ಲಿ ಆಡಳಿತ ಪಕ್ಷದ ನಾಯಕರೇ ಭಾಗಿಯಾಗಿರುವ ಆರೋಪವಿದ್ದು, ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಸರಣಿ ಟ್ವೀಟ್‌ ಮಾಡಿರುವ ಅವರು, ಸ್ವರ್ಣಾ ನದಿಯ ಮರಳು ಕಳ್ಳಸಾಗಣೆ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಿದ ವ್ಯಕ್ತಿಗೆ ಬೆದರಿಕೆ ಕರೆಗಳು ಬರುತ್ತಿದ್ದು, ಅವರಿಗೆ ತಕ್ಷಣ ಪೊಲೀಸ್‌ ಭದ್ರತೆ ಒದಗಿಸಬೇಕು. ಜೀವ ಭಯ ಹಾಕುತ್ತಿರುವ ವ್ಯಕ್ತಿಗಳನ್ನು ಪತ್ತೆಹಚ್ಚಿ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಭಾನುವಾರ ಮಾಜಿ ಸಚಿವ ಪ್ರಮೋದ್ ಮಧ್ವರಾಜ್‌ ಸ್ವರ್ಣಾ ನದಿ ಪಾತ್ರದಲ್ಲಿ ಮರಳು ದಂಧೆ ನಡೆಯುತ್ತಿದೆ. ಅಕ್ರಮ ಮರಳು ಸಾಗಾಟಕ್ಕೆ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಕುಮ್ಮಕ್ಕು ಇದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸರಣಿ ಟ್ವೀಟ್‌ ಮೂಲಕ ಒತ್ತಾಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT