ಬುಧವಾರ, ಜೂನ್ 23, 2021
22 °C

ಉಡುಪಿ: ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಅಜ್ಜರಕಾಡು ಮಹಾತ್ಮಾ ಗಾಂಧಿ ಕ್ರೀಡಾಗಣದಲ್ಲಿ ಶನಿವಾರ ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು.

ಕೋವಿಡ್ ಸೋಂಕು ತಡೆಗೆ ಶ್ರಮಿಸುತ್ತಿರುವ ಕೋವಿಡ್ ವಾರಿಯರ್ಸ್‌ಗಳಾದ ವೈದ್ಯರು, ಶುಶ್ರೂಷಕರು, ಪೌರಕಾರ್ಮಿಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. 

ಸಾರ್ವಜನಿಕರು ಮೊಬೈಲ್‌ನಲ್ಲಿ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.

ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಭಾಗವಹಿಸಿರಲಿಲ್ಲ.

ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಕರಾವಳಿ ಕಾವಲು ಪಡೆ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ಎಡಿಸಿ ಸದಾಶಿವ ಪ್ರಭು, ಎಸ್‌‌ಪಿ ವಿಷ್ಣುವರ್ಧನ್, ಕರಾವಳಿ ಕಾವಲುಪಡೆ ಎಸ್‌ಪಿ ಆರ್‌.ಚೇತನ್ ಉಪಸ್ಥಿತರಿದ್ದರು.

ಧ್ವಜಾರೋಹಣದ ಬಳಿಕ ಅಜ್ಜರಕಾಡು ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾಧಿಕಾರಿ ಪುಷ್ಪನಮನ ಸಲ್ಲಿಸಿದರು.
 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು