ಉಡುಪಿ: ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಹೆಬ್ರಿ ತಾಲ್ಲೂಕಿನ ಶಿವಪುರದಲ್ಲಿ 74.84 ಎಕ್ರೆ ಹಾಗೂ ಕೆರೆಬೆಟ್ಟುವಿನಲ್ಲಿ 38.75 ಎಕ್ರೆ ಖಾಸಗಿ ಹಾಗೂ ಸರ್ಕಾರಿ ಜಮೀನು ಸೇರಿದಂತೆ ಒಟ್ಟು 113.59 ಎಕ್ರೆ ಜಮೀನಿನ ಗಡಿ ಗುರುತಿಸುವ ಕಾರ್ಯದ ಬಗ್ಗೆ ಶೀಘ್ರ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಡಿ ಗುರುತಿಸುವ ಕಾರ್ಯವನ್ನು ಆದ್ಯತೆ ಮೇಲೆ ಕೈಗೊಳ್ಳುವಂತೆ ಹಿಂದಿನ ಸಭೆಯಲ್ಲಿ ಸೂಚಿಸಲಾಗಿತ್ತು. ಅದರಂತೆ ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಮೋಜಿಣಿ ಶಿವಮೊಗ್ಗ ಜಂಟಿ ಸಮೀಕ್ಷೆ ನಡೆಸಿದ್ದು, ಗಡಿ ಕಲ್ಲುಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದೆ ಎಂದರು.

ಬ್ರಹ್ಮಾವರ ತಾಲ್ಲೂಕಿನ ಉಪ್ಪೂರಿನಲ್ಲಿ 101.1950 ಎಕ್ರೆ ಖಾಸಗಿ ಜಮೀನನ್ನು ಸಣ್ಣ ಕೈಗಾರಿಕಾ ವಸಾಹತು ಸ್ಥಾಪನೆಗೆ ಗುರುತಿಸಲಾಗಿದ್ದು, ಈ ಕುರಿತ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಬೇಡಿಕೆಯ ವಿವರಗಳನ್ನು ಸಚಿವರಿಗೆ ಸಲ್ಲಿಸಲಾಗಿದೆ. ಅದಕ್ಕೆ ಸರ್ಕಾರದ ಮಟ್ಟದಲ್ಲಿ ಅನುಮೋದನೆ ಪಡೆಯಬೇಕು ಎಂದು ಹೇಳಿದರು. ಉಡುಪಿ ತಾಲ್ಲೂಕಿನ ಕೋಡಿಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆರ್ಣಂಕಿಲ ಗ್ರಾಮದ 28 ಎಕರೆ ಸರ್ಕಾರಿ ಜಮೀನಿನಲ್ಲಿ ಕೈಗಾರಿಕಾ ವಸಾಹತು ಸ್ಥಾಪಿಸಲು ಮಂಜೂರಾತಿ ನೀಡುವಂತೆ ಉಡುಪಿ ತಹಶೀಲ್ದಾರರಿಗೆ ಪತ್ರ ಬರೆಯಲಾಗಿದ್ದು, ಈ ಬಗ್ಗೆ ಕ್ರಮವಹಿಸುವಂತೆ ತಿಳಿಸಿದರು.

ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ಹೆಚ್ಚಿನ ಕಾಲಾವಕಾಶ ಪಡೆದಿರುವ ಘಟಕಗಳು ನಿಗದಿತ ಅವಧಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಅಂಥವರಿಗೆ ಮಂಜೂರಾಗಿರುವ ನಿವೇಶನವನ್ನು ರದ್ದುಪಡಿಸಿ, ಹೊಸದಾಗಿ ಅರ್ಜಿ ಸಲ್ಲಿಸಿರುವ ಉದ್ಯಮಿಗಳಿಗೆ ಹಂಚಿಕೆ ಮಾಡಲು ಕ್ರಮ ವಹಿಸಬೇಕು ಎಂದು ಕೆ.ಐ.ಎ.ಡಿ.ಬಿ ಅಧಿಕಾರಿಗಳಿಗೆ ಸೂಚಿಸಿದರು. ನಂದಿಕೂರು, ಬೆಳಪು ಹಾಗೂ ಮಿಯ್ಯಾರು ಕೈಗಾರಿಕಾ ಪ್ರದೇಶದ 18.39 ಎಕ್ರೆಯಲ್ಲಿ ಒಟ್ಟು 26 ಘಟಕಗಳು ಗುತ್ತಿಗೆ ಕರಾರು ನಿರ್ವಹಿಸಿಕೊಂಡಿದ್ದು, 6 ಘಟಕಗಳು ಅನುಷ್ಠಾನದ ಹಂತದಲ್ಲಿದ್ದು, 1 ಘಟಕವು ನ್ಯಾಯಾಲಯದ ಹಂತದಲ್ಲಿದ್ದು, 19 ಘಟಕಗಳು ಯಾವುದೇ ಕೆಲಸ ಆರಂಭಿಸಿರುವುದಿಲ್ಲ. ಘಟಕ ಪ್ರಾರಂಭಿಸದೇ ಇರುವ ಉದ್ದಿಮೆದಾರರ ಕರಾರು ರದ್ದುಪಡಿಸಿ, ಕೈಗಾರಿಕಾ ಘಟಕ ಸ್ಥಾಪನೆಗೆ ಮುಂದೆ ಬರುವ ಆಸಕ್ತರಿಗೆ ಅವಕಾಶ ಕಲ್ಪಿಸಬೇಕು ಎಂದರು. ಕೌಶಲಾಭಿವೃದ್ಧಿ ಇಲಾಖೆಯು ಕೈಗಾರಿಕೆಗಳಿಗೆ ಸಂಬಂಧಪಟ್ಟ ಕೌಶಲಗಳ ಕೋರ್ಸ್ಗಳನ್ನು ಹೆಚ್ಚುವರಿಯಾಗಿ ಅಳವಡಿಸಿಕೊಳ್ಳುವುದರೊಂದಿಗೆ ಐ.ಟಿ.ಐ, ಡಿಪ್ಲೊಮಾ ಪಡೆದ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.

ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ವಸಂತ ಕಿಣಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ನಗರಸಭೆ ಪೌರಾಯುಕ್ತ ಮಂಹಾತೇಶ ಹಂಗರಗಿ, ಕಾಸಿಯಾ ಪ್ರತಿನಿಧಿ ಹರೀಶ್ ಕುಂದರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-28-2140553034

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.